ರಾಷ್ಟ್ರೀಯ ಸುದ್ದಿ

ಬಿಜೆಪಿಯನ್ನು ಸೋಲಿಸಿ, ಮೋದಿ-ಶಾ ಕೆಳಗಿಸಲು ನಾವು ಏನು ಬೇಕಾದರೂ ಮಾಡುತ್ತೇವೆ: ಕೇಜ್ರಿವಾಲ್

ಒಂದು ವೇಳೆ ಮತ್ತೆ ಮೋದಿ ಅಧಿಕಾರಕ್ಕೇರಿದರೆ ಅದಕ್ಕೆ ಕಾಂಗ್ರೆಸ್ ನೇರ ಹೊಣೆ!

ವರದಿಗಾರ (ಎ.25): ಬಿಜೆಪಿಯನ್ನು ಸೋಲಿಸಿ, ಮೋದಿಯನ್ನು ಪ್ರಧಾನಿ ಸ್ಥಾನದಿಂದ ಮತ್ತು ಅಮಿತ್ ಶಾ ಅವರನ್ನು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವುದೇ ಆಮ್ ಆದ್ಮಿ ಪಕ್ಷದ ಮುಖ್ಯ ಉದ್ದೇಶ. ಮೋದಿ-ಶಾ ಜೋಡಿಯನ್ನು ಪರಾಭವಗೊಳಿಸಲು ನಾವು ಏನು ಬೇಕಾದರೂ ಮಾಡುತ್ತೇವೆ. ಯಾವುದೇ ಮಹಾಮೈತ್ರಿಗೂ ನಮ್ಮ ಪೂರ್ಣ ಬೆಂಬಲವಿರುತ್ತದೆ ಎಂದು  ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ವೀಡಿಯೋ ವೀಕ್ಷಿಸಿ:

https://twitter.com/AamAadmiParty/status/1121345240529391621?s=20

ಅವರು ಆಮ್ ಆದ್ಮಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡುತ್ತಾ, 2019ರ ಚುನಾವಣೆ ದೇಶದ ಟರ್ನಿಂಗ್ ಪಾಯಿಂಟ್ ಆಗಲಿದೆ. 2019ರ ಲೋಕಸಭಾ ಚುನಾವಣೆಯು ದೇಶವನ್ನು ಕಾಪಾಡಲು, ಸಂವಿಧಾನವನ್ನು ಕಾಪಾಡಲು ಇರುವುದಾಗಿದೆ. ನಾವೆಲ್ಲರೂ ಮೊದಲು ಭಾರತೀಯರು ಆನಂತರವೇ ಹಿಂದೂ ಅಥವಾ ಮುಸ್ಲಿಂ ಎಂದು ಹೇಳಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಾಗಿದೆ ಎಂದೂ ಕೇಜ್ರಿವಾಲ್ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, ‘ಮೈತ್ರಿ ರೂಪಿಸಲು ರಾಹುಲ್ ವಿಫಲರಾಗಿದ್ದಾರೆ. ಟ್ವಿಟರ್‌ನಲ್ಲಿ ಯಾವ ಮೈತ್ರಿ ರಚನೆಯಾಗಿತ್ತು ಎಂದು ನಾನು ರಾಹುಲ್ ಗಾಂಧಿಯಲ್ಲಿ ಕೇಳಲು ಬಯಸುತ್ತೇನೆ. ಮೋದಿ ಮತ್ತು ಅಮಿತ್ ಶಾ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಅದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇರ ಹೊಣೆಯಾಗಿರುತ್ತಾರೆ’ ಎಂದು ಹೇಳಿದ್ದಾರೆ

ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಮೈತ್ರಿ ಮಾಡಲು ಇಚ್ಛಿಸಿದರೂ ಕಾಂಗ್ರೆಸ್ ಅದನ್ನು ಗಂಭೀರವಾಗಿ ಪರಿಗಣಿಸದೆ ತಿರಸ್ಕರಿಸಿದ್ದಾರೆ. ಇದು ಕಾಂಗ್ರೆಸ್ ಪಾಲಿಗೆ ಮುಳುವಾಗಲಿದೆ ಎಂದು ಹೇಳಿದ್ದಾರೆ. ಕಳೆದ ವಾರವಿಡೀ ಮೈತ್ರಿ ಬಗ್ಗೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಚರ್ಚೆ ನಡೆಸಿತ್ತು. ಆದರೆ ದೆಹಲಿಯ ಹೊರಗೂ ಮೈತ್ರಿ ಬೇಕು ಎಂದು ಎಎಪಿ ಬೇಡಿಕೆಯೊಡ್ಡಿದ್ದರಿಂದ ಕೊನೆಯ ಕ್ಷಣದಲ್ಲಿ ಮೈತ್ರಿ ಬೇಡ ಎಂದು ಕಾಂಗ್ರೆಸ್ ಹೇಳಿತ್ತು.  ದೆಹಲಿಗೆ ರಾಜ್ಯದ ಸ್ಥಾನಮಾನ ನೀಡುತ್ತೇವೆ ಎಂಬ ಭರವಸೆಯನ್ನು ಎಎಪಿ ನೀಡಿದ್ದು, ರಾಜ್ಯ ಸ್ಥಾನಮಾನ ಸಿಗುವುದಕ್ಕಾಗಿ ನಾವು ಹೋರಾಟ ಮುಂದುವರಿಸುತ್ತೇವೆ ಎಂದಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group