ರಾಜ್ಯ ಸುದ್ದಿ

ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಎಲ್ಲೂ ಹೇಳಬೇಡಿ: ಬಿಜೆಪಿ ನಾಯಕರಿಗೆ ಮನವಿ ಮಾಡಿದ ಯಡಿಯೂರಪ್ಪ

ವರದಿಗಾರ (ಮೇ.6): ‘ಸಮ್ಮಿಶ್ರ ಸರ್ಕಾರ ಬೀಳಲಿದೆ, ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಎಲ್ಲೂ ಹೇಳಬೇಡಿ. ದಯಮಾಡಿ ಈ ಬಗ್ಗೆ ನಿಮ್ಮನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ’ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಮ್ಮ ಪಕ್ಷದ ನಾಯಕರೊಂದಿಗೆ ಮನವಿ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೇ 23ರ ಬಳಿಕ ಸಮ್ಮಿಶ್ರ ಸರ್ಕಾರ ಇರಲ್ಲ ಎಂದು ನಾನು ಎಲ್ಲಿಯೂ ಮಾತನಾಡಿಲ್ಲ’ ಎಂದು ಹೇಳಿದ್ದಾರೆ.

“ಯಡಿಯೂರಪ್ಪ ಮುಖ್ಯಮಂತ್ರಿ ಆಗುವ ಹಗಲು ಕನಸು ಕಾಣುತ್ತಿದ್ದಾರೆ” ಎಂಬ ಕಾಂಗ್ರೆಸ್‌ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ’ನಾನು ಮುಖ್ಯಮಂತ್ರಿ ಆಗುತ್ತೇನೆ ಎಂಬ ಕನಸೇ ಕಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ದೇಶದ ಮತದಾರರು ತೆಗೆದುಕೊಳ್ಳುವ ತೀರ್ಮಾನದ ಆಧಾರದ ಮೇಲೆ ಮುಂದಿನ ಬಗ್ಗೆ ಯೋಚಿಸೋಣ’ ಎಂದು ಹೇಳಿದ್ದಾರೆ. ’ಕಾಂಗ್ರೆಸ್‌ನ 20ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆಗಿಲ್ಲ. ಅವರ ವಿರುದ್ಧ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌, ಜೆಡಿಎಸ್‌ ಮುಖಂಡರ ಕಚ್ಚಾಟ ಉಲ್ಬಣವಾಗಲಿದ್ದು, ರಾಜ್ಯ ರಾಜಕೀಯದ ಮೇಲೆ ಇದರ ಪರಿಣಾಮ ಆಗಬಹುದು’ ಎಂದಿದ್ದಾರೆ.  ’ರೈತರಿಗೆ ಸಾಲಮನ್ನಾ ಋಣಮುಕ್ತ ಪತ್ರ ನೀಡುತ್ತೇನೆ ಎಂದಿದ್ದ ಮುಖ್ಯಮಂತ್ರಿ ಇದೀಗ ಸಾಂತ್ವನ ಪತ್ರ ನೀಡುತ್ತೇನೆ ಎಂದಿರುವುದು ನಗೆಪಾಟಲಿನ ವಿಷಯ. ಈ ಮೂಲಕ ರೈತ ಸಮುದಾಯಕ್ಕೆ ಅವರು ನಂಬಿಕೆ ದ್ರೋಹ ಮಾಡಿದ್ದಾರೆ’ ಎಂದು ಆರೋಪಿಸಿದ್ದಾರೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group