ರಾಜ್ಯ ಸುದ್ದಿ

ಹೃದಯ, ದೇಶಪ್ರೇಮ ಎರಡೂ ಇಲ್ಲದವರು ಮೋದಿ: ಮಲ್ಲಿಕಾರ್ಜುನ ಖರ್ಗೆ

‘ಸುಳ್ಳು ಹೇಳುವುದೇ ಮೋದಿ ಹುಟ್ಟು ಗುಣ. ಯಾವ ವಿಚಾರವನ್ನು ಮಾತನಾಡಬೇಕು ಎನ್ನುವ ಕನಿಷ್ಠ ಜ್ಞಾನವೂ ಇಲ್ಲ’

ವರದಿಗಾರ (ಮೇ.7): ದೇಶಕ್ಕಾಗಿ ಹುತಾತ್ಮರಾದ ರಾಜೀವ್‌ಗಾಂಧಿ ಬಗ್ಗೆ ಕೀಳಾಗಿ ಮಾತನಾಡುವುದು ಸರಿಯಲ್ಲ. ನರೇಂದ್ರ ಮೋದಿ ಅವರಿಗೆ ಹೃದಯವೂ ಇಲ್ಲ, ದೇಶ ಪ್ರೇಮವೂ ಇಲ್ಲ’ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜೀವ್‌ಗಾಂಧಿ ನಂಬರ್ ಒನ್ ಭ್ರಷ್ಟನಾಗಿ ಸಾವನಪ್ಪಿದ್ದಾರೆ ಎಂದು ಮೋದಿ ಹೇಳಿದ್ದಾರೆ”. 30 ವರ್ಷಗಳ ಹಿಂದೆಯೇ ಈ ವಿಚಾರವನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೂ, ಮೋದಿ ಈ ವಿಷಯವನ್ನು ಪ್ರಸ್ತಾಪಿಸಿರುವುದು ಖಂಡನೀಯ’ ಎಂದು ಪ್ರಧಾನಿ ಮೋದಿ ಹೇಳಿಕೆಯನ್ನು ತೀಕ್ಷವಾಗಿ ಅವರು ಖಂಡಿಸಿದ್ದಾರೆ.

‘ಸುಳ್ಳು ಹೇಳುವುದೇ ಮೋದಿ ಅವರ ಹುಟ್ಟುಗುಣ. ಯಾವ ವಿಚಾರವನ್ನು ಮಾತನಾಡಬೇಕು ಎನ್ನುವ ಕನಿಷ್ಠ ಪ್ರಜ್ಞೆಯೂ ಅವರಿಗೆ ಇಲ್ಲ. ಇಂಥವರು ನಮ್ಮ ದೇಶದ ಪ್ರಧಾನಿಯಾಗಿರುವುದು ದೇಶದ ಜನರ ದುರ್ದೈವ. ಕೇವಲ ಮಾತಿನಿಂದ ಮರುಳು ಮಾಡುವವರಿಗೆ ಈ ಬಾರಿ ಜನ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಭವಿಷ್ಯ ನುಡಿಯಲು ಪ್ರಯತ್ನಿಸಿದ್ದಾರೆ.

‘ಅಮೇಥಿಯಲ್ಲಿ ರಾಹುಲ್ ಗಾಂಧಿ ಸೋಲು ನಿಶ್ಚಿತ’ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ತಿರುಗೇಟು ನೀಡಿದ ಖರ್ಗೆ, ‘ಮೋದಿಗೆ ಸ್ವಲ್ಪವೂ ರಾಜಕೀಯ ಜ್ಞಾನವಿಲ್ಲ. ದೇಶದಲ್ಲಿ 40 ಸ್ಥಾನಗಳನ್ನೂ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ. ಇದು ಸಾಧ್ಯವೇ. ಮೋದಿಗೆ ರಾಜಕೀಯ ಜ್ಞಾನವಷ್ಟೇ ಅಲ್ಲ, ಆರ್ಥಿಕ ಜ್ಞಾನವೂ ಇಲ್ಲ. ಚಿಕ್ಕಂದಿನಿಂದಲೇ ಮನೆ ಬಿಟ್ಟಿರುವುದರಿಂದ ಸಂಸ್ಕಾರವೂ ಇಲ್ಲ. ಅಮೇಥಿ, ರಾಯ್‌ಬರೇಲಿಯಲ್ಲಿ ಕಾಂಗ್ರೆಸ್ ಗೆದ್ದರೆ ಮೋದಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರಾ’ ಎಂದು ಇದೇ ಸಂದರ್ಭದಲ್ಲಿ ಅವರು ಪ್ರಶ್ನಿಸಿದ್ದಾರೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group