ರಾಜ್ಯ ಸುದ್ದಿ

ಪರಿಶಿಷ್ಟ ನೌಕರರ ಭಡ್ತಿ ಮೀಸಲಾತಿಯ ಸುಪ್ರೀಂ ತೀರ್ಪಿಗೆ ಪಾಪ್ಯುಲರ್ ಫ್ರಂಟ್ ಸ್ವಾಗತ

ವರದಿಗಾರ (ಮೇ.11): ಎಸ್ಸಿ-ಎಸ್ಟಿಗೆ ಸೇರಿದ ಸರಕಾರಿ ನೌಕರರಿಗೆ ಭಡ್ತಿಯಲ್ಲಿ ಮೀಸಲಾತಿಯನ್ನು ಮಂಜೂರು ಮಾಡಿರುವ 2017ರ ಕರ್ನಾಟಕ ಸರಕಾರದ ಆದೇಶದ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಸ್ವಾಗತಿಸಿದ್ದು, ಈ ಬಗ್ಗೆ ತನ್ನ ಅಧಿಕೃತ ಹೇಳಿಕೆಯನ್ನು ಹೊರಡಿಸಿದೆ.

ಸಾಮಾಜಿಕ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದಿರುವ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಈ ತೀರ್ಪು ಬಹಳಷ್ಟು ಸಹಾಯಕವಾಗಲಿದೆ. ಭಡ್ತಿ ಮೀಸಲಾತಿ ಜಾರಿಯಾದರೆ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಕೂಗನ್ನು ಎಬ್ಬಿಸಲಾಗುತ್ತಿದೆ. ಇಂತಹ ಸೋಗಲಾಡಿತನದ ಮಾತುಗಳು ಕೇವಲ ಜಾತಿವಾದಿಗಳು ಮತ್ತು ಮೇಲ್ವರ್ಗದ ಪರವಾದ ಹಿತಾಸಕ್ತಿಗಳಿಂದಷ್ಟೇ ಕೇಳಿ ಬರಲು ಸಾಧ್ಯ. ಭಡ್ತಿ ಮೀಸಲಾತಿಯಿಂದ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯನ್ನು ದೊರಕಿಸಬಹುದಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಮುಹಮ್ಮದ್ ಸಾಕಿಬ್ ಅಭಿಪ್ರಾಯ ಪಟ್ಟಿದ್ದಾರೆ.

ಹಿಂದುಳಿದ ಸಮುದಾಯಗಳ ಸಬಲೀಕರಣವು ಯಾವುದೇ ಒಂದು ಆಡಳಿತ ಸರಕಾರದ ಮಹತ್ವದ ಹೊಣೆಗಾರಿಕೆಯಾಗಿರುತ್ತದೆ, ಈ ನಿಟ್ಟಿನಲ್ಲಿ ಶೋಷಿತ ಮತ್ತು ಮೂಲೆಗೆಸೆಯಲ್ಪಟ್ಟ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ರಾಜ್ಯ ಸರಕಾರದ ಇಂತಹ ಜನಪರವಾದ ನಿಲುವು ಶ್ಲಾಘನೀಯವಾಗಿದೆ. ಆಡಳಿತ ಸರಕಾರವು ದಲಿತರು ಮತ್ತು ಅಲ್ಪಸಂಖ್ಯಾತರು ಸೇರಿದಂತೆ ಅತಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಕಲ್ಪಿಸುವ ಮೂಲಕ ಅವರ ಸಮಾಜೋ-ಆರ್ಥಿಕ ಸ್ಥಿತಿಗತಿಯಲ್ಲಿ ಸುಧಾರಣೆ ತರಬಹುದಾಗಿದ್ದು, ಈ ನಿಟ್ಟಿನಲ್ಲಿ ಅದು ಪರಿಣಾಮಕಾರಿ ಯೋಜನೆಗಳನ್ನು ಹಮ್ಮಿಕೊಳ್ಳಬೇಕೆಂದು ಮುಹಮ್ಮದ್ ಸಾಕಿಬ್ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

ಮುಹಮ್ಮದ್ ಸಾಕಿಬ್

 ರಾಜ್ಯಾಧ್ಯಕ್ಷ, ಪಾಪ್ಯುಲರ್ ಫ್ರಂಟ್ ಕರ್ನಾಟಕ

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group