ರಾಷ್ಟ್ರೀಯ ಸುದ್ದಿ

ಚುನಾವಣಾ ಪ್ರಚಾರ ಮುಕ್ತಾಯಗೊಳಿಸಲು ಚುನಾವಣಾ ಆಯೋಗ ಸೂಚನೆ; ಪ್ರಧಾನಿ ಮೋದಿ, ಅಮಿತ್ ಶಾಗೆ ನೀಡಿರುವ ಅನೈತಿಕ ಉಡುಗೊರೆ: ಮಮತಾ ಬ್ಯಾನರ್ಜಿ

‘ಚುನಾವಣಾ ಆಯೋಗದಲ್ಲಿ ಆರೆಸ್ಸೆಸ್ಸಿಗರನ್ನೇ ತುಂಬಿಸಿಕೊಂಡಿದ್ದಾರೆ’

ವರದಿಗಾರ (ಮೇ 17): ಚುನಾವಣಾ ಪ್ರಚಾರ ಮುಕ್ತಾಯಗೊಳಿಸಲು ಚುನಾವಣಾ ಆಯೋಗ ಸೂಚಸಿರುವುದನ್ನು ಕಟುವಾಗಿ ಟೀಕಿಸಿರುವ ಮಮತಾ ಬ್ಯಾನರ್ಜಿಯವರು, ಪ್ರಧಾನಿ ಮೋದಿ ಮತ್ತು ಅಮಿತ್ ಶಾಗೆ ಚುನಾವಣಾ ಆಯೋಗವು ನೀಡಿರುವ ಅನೈತಿಕ ಉಡುಗೊರೆ ಎಂದು ಹೇಳಿ ಚಾಟಿ ಬೀಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಕಾರ್ಯವನ್ನು ಒಂದು ದಿನದ ಮೊದಲೇ ಮುಕ್ತಾಯಗೊಳಿಸುವಂತೆ ಚುನಾವಣಾ ಆಯೋಗ ನೀಡಿರುವ ಸೂಚನೆಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಚುನಾವಣಾ ಆಯೋಗವು ಪ್ರಧಾನಿ ಮೋದಿ ಹಾಗೂ ಅಮಿತ್ ಶಾಗೆ ನೀಡಿರುವ ಅಭೂತಪೂರ್ವ, ಅಸಾಂವಿಧಾನಿಕ ಮತ್ತು ಅನೈತಿಕ ಉಡುಗೊರೆಯಾಗಿದೆ. ಈ ರೀತಿಯ ಪಕ್ಷಪಾತತನದ, ಆರೆಸ್ಸೆಸ್ ಜನರೇ ತುಂಬಿರುವ ಚುನಾವಣಾ ಆಯೋಗವನ್ನು ತಾನು ಇದುವರೆಗೂ ನೋಡಿಲ್ಲ . ಪಶ್ಚಿಮ ಬಂಗಾಳದಲ್ಲಿ ಮಧ್ಯರಾತ್ರಿ ಇವಿಎಂಗಳಲ್ಲಿ ಹಸ್ತಕ್ಷೇಪ ನಡೆಸಲು ಬಿಜೆಪಿ ಯತ್ನಿಸುತ್ತಿದೆ. ಮತದಾರರಿಗೆ ಹಣ ಹಂಚಲು ಕೇಂದ್ರದ ಪಡೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿರುವ ಬ್ಯಾನರ್ಜಿ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಆರೋಪಿಸಿದ್ದಾರೆ.

ಮಂಗಳವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೋಲ್ಕತಾದಲ್ಲಿ ನಡೆಸಿದ ರೋಡ್‌ಶೋ ಸಂದರ್ಭ ಹಿಂಸಾಚಾರ ಸಂಭವಿಸಿದ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯವನ್ನು ಒಂದು ದಿನದ ಮೊದಲೇ ಅಂತ್ಯಗೊಳಿಸಲು ಚುನಾವಣಾ ಆಯೋಗ ಸೂಚಿಸಿದೆ. ಭಾರತದ ಚುನಾವಣಾ ಇತಿಹಾಸದಲ್ಲೇ ಮೊದಲ ಬಾರಿಗೆ ಚುನಾವಣಾ ಆಯೋಗ ಇಂತಹ ಕ್ರಮ ಕೈಗೊಂಡಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group