ರಾಷ್ಟ್ರೀಯ ಸುದ್ದಿ

ಮಹಾತ್ಮಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತನೆಂದವರನ್ನು ಕ್ಷಮಿಸುವುದಿಲ್ಲ: ಪ್ರಧಾನಿ ಮೋದಿ

ವರದಿಗಾರ (ಮೇ 17): ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಭೋಪಾಲ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್‌ ಬಣ್ಣಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು, ಈ ನಡೆಯನ್ನು ಕ್ಷಮಿಸುವುದಿಲ್ಲವೆಂದು ಹೇಳಿರುವುದಾಗಿ ಮೂಲಗಳು ವರದಿ ಮಾಡಿವೆ.

ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನದ ಹಿನ್ನೆಲೆಯಲ್ಲಿ ನ್ಯೂಸ್ 24’ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿಯು ಪ್ರಜ್ಞಾ ಹೇಳಿಕೆಯನ್ನು ಖಂಡಿಸಿದ್ದು, ಅಂತಹ ಹೇಳಿಕೆಗಳು ಸಮಾಜಕ್ಕೆ ಹಾನಿಕರ ಎಂದು ಹೇಳಿದ್ದಾರೆ. ‘ಗಾಂಧಿ ಅಥವಾ ನಾಥೂರಾಮ್ ಗೋಡ್ಸೆ ಕುರಿತು ಪ್ರಜ್ಞಾ ನೀಡಿರುವ ಹೇಳಿಕೆ ಕೆಟ್ಟ ಅಭಿರುಚಿಯಿಂದ ಕೂಡಿದ್ದಲ್ಲದೆ ಸಮಾಜಕ್ಕೆ ಹಾನಿಕಾರಕ. ಹೇಳಿಕೆ ಕುರಿತು ಪ್ರಜ್ಞಾ ಕ್ಷಮೆಯಾಚಿಸಿದ್ದರೂ ಆಕೆಯನ್ನು ಪೂರ್ತಿಯಾಗಿ ಕ್ಷಮಿಸುವುದು ನನ್ನಿಂದ ಸಾಧ್ಯವಿಲ್ಲ’ ಎಂದು ಮೋದಿ ಪ್ರತಿಕ್ರಿಯಿಸಿದ್ದಾರೆ.

ಮಹಾತ್ಮಾ ಗಾಂಧಿ ಹಂತಕ ಗೋಡ್ಸೆ ಪರ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಎಚ್ಚೆತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೋಡ್ಸೆ ಕುರಿತು ಈ ನಾಯಕರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಕೈ ತೊಳೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಇಂತಹ ಹೇಳಿಕೆಗಳು ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾದವು ಎಂದಿರುವ ಶಾ, ಈ ವಿಷಯಕ್ಕೆ ಸಂಬಂಧಿಸಿ ಮುಂದಿನ ಕ್ರಮ ಕೈಗೊಳ್ಳುವುದಕ್ಕಾಗಿ 10 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಪಕ್ಷದ ಶಿಸ್ತು ಸಮಿತಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮೋದಿಯವರು ಮೊದಲ ಬಾರಿಗೆ ತನ್ನ ಪಕ್ಷದವರು ಸಮಾಜಕ್ಕೆ ಹಾನಿಯುನ್ನುಂಟು ಮಾಡುವ ಸಂದರ್ಭದಲ್ಲಿ ಮಾತನಾಡಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಹೇಳಿಕೊಳ್ಳಲು ಪ್ರಾರಂಭಿಸಿದ್ದಾರೆ.

 

 

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group