ರಾಷ್ಟ್ರೀಯ ಸುದ್ದಿ

ಕಾಂಗ್ರೆಸ್ ಪ್ರತಿನಿಧಿಗಳು ಮುಂದಿನ 1 ತಿಂಗಳು ಟಿ.ವಿ ಚರ್ಚೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ: ಕಾಂಗ್ರೆಸ್ ಆದೇಶ

ವರದಿಗಾರ (ಮೇ 30): ಕಾಂಗ್ರೆಸ್ ಜನಪ್ರತಿನಿಧಿಗಳು ಮುಂದಿನ ಒಂದು ತಿಂಗಳವರೆಗೆ ಯಾವುದೇ ಸುದ್ದಿವಾಹಿನಿಗಳಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಕಾಂಗ್ರೆಸ್ ತೀರ್ಮಾನಿಸಿರುವುದಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಕಾಂಗ್ರೆಸ್ ಪ್ರತಿನಿಧಿಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ ಎಂದು ಸುದ್ದಿ ಮಾಧ್ಯಮಗಳೊಂದಿಗೆ ಸುರ್ಜೇವಾಲಾ ವಿನಂತಿಸಿದ್ದಾರೆ.

ಒಂದು ತಿಂಗಳವರೆಗೆ ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸಲು ಕಾಂಗ್ರೆಸ್  ಪ್ರತಿನಿಧಿಗಳನ್ನು ಕಳಿಸುವುದಿಲ್ಲ ಎಂದು ಪಕ್ಷ ತೀರ್ಮಾನಿಸಿದೆ. ಎಲ್ಲ ಸುದ್ದಿವಾಹಿನಿಗಳು/ಸಂಪಾದಕರು  ಚರ್ಚೆಗಾಗಿ ಕಾಂಗ್ರೆಸ್ ಜನ ಪ್ರತಿನಿಧಿಗಳನ್ನು ಕರೆಯಬೇಡಿ ಎಂದು ಮನವಿ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಪಕ್ಷ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುತ್ತಾರಾ ಇಲ್ಲವಾ ಎಂಬುದರ ಬಗ್ಗೆ ಅನಿಶ್ಚಿತತೆ ಇದ್ದು, ಈ ಹೊತ್ತಲ್ಲೇ ಕಾಂಗ್ರೆಸ್ ಜನಪ್ರತಿನಿಧಿಗಳು ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸದಂತೆ ಕಾಂಗ್ರೆಸ್ ನಿರ್ಬಂಧ ಹೇರಿದ್ದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಮೂಲಗಳ ಪ್ರಕಾರ ಇದೊಂದು ಉತ್ತಮ ಬೆಳವಣಿಗೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.

 

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group