ಹನಿ ಸುದ್ದಿ

ಭಯೋತ್ಪಾದಕ ದಾಳಿಯನ್ನು ತಡೆಯಲು ಸೂಕ್ತ ಕ್ರಮ ಅಗತ್ಯ: ಕಾಂಗ್ರೆಸ್

ವರದಿಗಾರ (ಜೂನ್.13): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಖಂಡಿಸಿದ್ದು, ಭಯೋತ್ಪಾದಕ ದಾಳಿಯನ್ನು ತಡೆಯಲು ಸೂಕ್ತ ಕ್ರಮದ ಅಗತ್ಯತೆಯಿದೆ ಎಂದು ಹೇಳಿದೆ.

ಈ ದಾಳಿಯಲ್ಲಿ ಐವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿ, ಇತರ ನಾಲ್ವರು ಯೋಧರು ಗಾಯಗೊಂಡಿದ್ದರು . ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಮಾಧ್ಯಮ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಸರ್ಕಾರ ಮತ್ತು ಗುಪ್ತಚರ ಸಂಸ್ಥೆಗಳು ಸರಿಯಾದ ಕ್ರಮ ತೆಗೆದುಕೊಳ್ಳಬೇಕು, ಇದರಿಂದ ಭವಿಷ್ಯದ ದಾಳಿ ತಡೆಗಟ್ಟಬಹುದಾಗಿದೆ ಎಂದು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group