ರಾಜ್ಯ ಸುದ್ದಿ

ಕರ್ನಾಟಕ ಸರಕಾರವನ್ನು ಕೆಡವಲು ಅಮಿತ್ ಶಾ, ಮೋದಿ ನೇರ ಭಾಗಿ: ಸಿದ್ದರಾಮಯ್ಯ ಆರೋಪ

‘ನಮ್ಮ ಶಾಸಕರನ್ನು ಸೆಳೆಯಲು ಬಿಜೆಪಿ ಹಣ, ಅಧಿಕಾರದ ಆಮಿಷ ಒಡ್ಡುತ್ತಿದೆ’

ವರದಿಗಾರ (ಜೂನ್.2): ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಕೆಡವಲು ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ.

‘ಬಿಜೆಪಿಗೆ ನಮ್ಮ ಶಾಸಕರನ್ನು ಸೆಳೆಯಲು ಅವರು ಹಣ ಹಾಗೂ ಅಧಿಕಾರದ ಆಮಿಷ ಒಡ್ಡುತ್ತಿದ್ದಾರೆ. ಹೇಗಾದರೂ ರಾಜ್ಯ ಸರಕಾರವನ್ನು ಉರುಳಿಸಬೇಕು ಎಂಬುದು ಅವರ ಉದ್ದೇಶ. ಆದರೆ ಈ ಪ್ರಯತ್ನದಲ್ಲಿ ಅವರು ಖಂಡಿತಾ ಸಫಲರಾಗುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ಬಳ್ಳಾರಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹಾಗೂ ಗೋಕಾಕ್ ನ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸುತ್ತಾ, ‘ರಾಜ್ಯ ಸರಕಾರಕ್ಕೆ ಯಾವುದೇ ಆತಂಕ ಇಲ್ಲ. ಆ ಇಬ್ಬರು ಶಾಸಕರು ಬಿಜೆಪಿಯನ್ನು ಸೇರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group