ರಾಜ್ಯ ಸುದ್ದಿ

‘ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ, ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ಐದು ಬಾರಿ ಪ್ರಯತ್ನಿಸಿತ್ತು’: ಸಿದ್ದರಾಮಯ್ಯ

‘ಅಧಿಕಾರವನ್ನು ದುರುಪಯೋಗಪಡಿಸಿ ಬಿಜೆಪಿಯು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯುತ್ತಿದೆ’

‘ದಯವಿಟ್ಟು ವಾಪಾಸ್ ಬನ್ನಿ, ನಿಮ್ಮ ಸಮಸ್ಯೆಗಳನ್ನು ಆಲಿಸುತ್ತೇವೆ’; ಅತೃಪ್ತ ಶಾಸಕರಿಗೆ ಮನವಿ

ವರದಿಗಾರ (ಜುಲೈ,08): ‘ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ. ಮೈತ್ರಿ ಸರಕಾರವನ್ನು ಕೆಡವಲು ಬಿಜೆಪಿ ಐದು ಬಾರಿ ಪ್ರಯತ್ನಿಸಿತ್ತು. ಇದು ಅವರ ಆರನೇ ಯತ್ನ. ಇದಲ್ಲಿಯೂ ಅವರಿಗೆ ಯಶಸ್ಸು ಸಿಗಲು ಸಾಧ್ಯವಿಲ್ಲ. ಕಾಂಗ್ರೆಸ್ ಎಂದಿಗೂ ಹೀಗೆ ಮಾಡಿರಲಿಲ್ಲ. 2008ರಲ್ಲಿಯೂ ಬಿಜೆಪಿ ಇದೇ ರೀತಿ ಮಾಡಿ ಅಧಿಕಾರ ಗಟ್ಟಿ ಮಾಡಿಕೊಂಡಿತ್ತು’ ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮೈತ್ರಿ ಸರಕಾರದಲ್ಲಿ ನಡೆಯುತ್ತಿರುವ ರಾಜೀನಾಮೆಯ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ‘ರಾಜೀನಾಮೆ ಕೊಟ್ಟು ಹೊರಗೆ ಹೋಗಿರುವ ನಮ್ಮ ಎಲ್ಲ ಶಾಸಕರನ್ನು ನಾನು ವಿನಂತಿಸುತ್ತೇನೆ. ದಯವಿಟ್ಟು ವಾಪಸ್ ಬನ್ನಿ. ನಿಮ್ಮ ಸಮಸ್ಯೆಗಳನ್ನು ನಾವು ಆಲಿಸುತ್ತೇವೆ, ಪರಿಹರಿಸುತ್ತೇವೆ’ ಎಂದು ಹೇಳಿದ್ದಾರೆ.

‘ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಿಬಿಐ, ಆದಾಯ ತೆರಿಗೆ, ಜಾರಿ ನಿರ್ದೇಶನಾಯಗಳನ್ನು ದುರುಪಯೋಗಪಡಿಸಿಕೊಂಡು, ಹಣ ಮತ್ತು ಅಧಿಕಾರದ ಆಮಿಷವೊಡ್ಡಿ ಬಿಜೆಪಿಯು ಜೆಡಿಎಸ್ ಮತ್ತು ಕಾಂಗ್ರೆಸ್‌ ಶಾಸಕರನ್ನು ತನ್ನೆಡೆಗೆ ಸೆಳೆಯುತ್ತಿದೆ’ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

‘ಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಹಲವು ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ಅಂಥವರಿಗೆ ಅಧಿಕಾರದ ಹಾದಿ ಸುಗಮವಾಗಲಿ, ನಂಬಿಕೆ ಬರಲಿ ಎಂದು ಈಗಾಗಲೇ ಹಲವು ಸಚಿವರು ಸ್ವಯಂ ರಾಜೀನಾಮೆ ಕೊಟ್ಟಿದ್ದಾರೆ. ಸಚಿವ ಸಂಪುಟವನ್ನು ಈಗಲೇ ಮರು ರಚನೆ ಮಾಡಿ ಎಂದು ಒಕ್ಕೊರಲಿನಿಂದ ಸಲಹೆ ನೀಡಿದ್ದಾರೆ’ ಎಂದು ರಾಜೀನಾಮೆ ಪ್ರಕ್ರಿಯೆಗಳ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

‘ನಮ್ಮ ಶಾಸಕರು ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ನಮ್ಮ ಪಾಲಿಗೆ ಬಂದ 22 ಸಚಿವ ಸ್ಥಾನಗಳನ್ನು ಸೀನಿಯಾರಿಟಿ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕತೆಯನ್ನು ಗಮನದಲ್ಲಿರಿಸಿಕೊಂಡು ಹಂಚಲಾಯಿತು. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗುತ್ತೆ. ಹಿಂದಿರುಗಿ ಬನ್ನಿ’ ಎಂದು ಅವರು ಈ ಸಂದರ್ಭದಲ್ಲಿ ರಾಜೀನಾಮೆ ನೀಡಲು ಮುಂದಾದ ಶಾಸಕರೊಂದಿಗೆ ಮನವಿ ಮಾಡಿಕೊಂಡಿದ್ದಾರೆ.

 

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group