ರಾಜ್ಯ ಸುದ್ದಿ

ಬಿಜೆಪಿಗೂ ಕರ್ನಾಟಕದ ಬೆಳವಣಿಗೆಗೂ ಸಂಬಂಧವಿಲ್ಲ ಎಂಬ ಮಾತನ್ನು ನೀವು ನಂಬ್ತೀರಾ? ಶಿವಕುಮಾರ್ ಪ್ರಶ್ನೆ

‘ಮೈತ್ರಿ ಸರ್ಕಾರ ಸುಭದ್ರವಾಗಿದೆ. ಸರ್ಕಾರ ಮುಂದುವರಿಯುತ್ತೆ’

ವರದಿಗಾರ (ಜುಲೈ.09): ಬಿಜೆಪಿಗೂ ಕರ್ನಾಟಕದ ಬೆಳವಣಿಗೆಗೂ ಸಂಬಂಧವಿಲ್ಲ ಎಂಬ ಮಾತನ್ನು ನೀವು ನಂಬ್ತೀರಾ ಎಂದು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ,  ‘ದೆಹಲಿಯಲ್ಲಿ ರಾಜನಾಥ್ ಸಿಂಗ್ ಪಕ್ಷಕ್ಕೂ ಕರ್ನಾಟಕದ ಬೆಳವಣಿಗೆಗೂ ಸಂಬಂಧವಿಲ್ಲ ಎಂದು ಹೇಳುತ್ತಾರೆ. ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬಿರುಸಿನ ರಾಜಕೀಯ ಚಟುವಟಿಕೆಗಳಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳುತ್ತಿದ್ದಾರೆ ಆದರೆ ಅವರ ಪಿಎ ಯನ್ನು ನಮ್ಮ ಎಲ್ಲಾ ಸಚಿವರನ್ನು ಕರೆದುಕೊಂಡು ಹೋಗಲು ಕಲಿಸುತ್ತಾರೆ. ಹಾಗಾಗಿ ಇವರ ಮಾತುಗಳನ್ನು ನೀವು ನಂಬ್ತೀರಾ’ ಎಂದು ಶಿವಕುಮಾರ್ ಪ್ರಶ್ನಿಸಿದ್ದಾರೆ.

‘ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿದೆ. ಸರ್ಕಾರ ಮುಂದುವರಿಯುತ್ತೆ’ ಎಂದು ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group