ರಾಜ್ಯ ಸುದ್ದಿ

‘ರಾಜಭವನವನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ, ರಾಜ್ಯಪಾಲರು ಅವರ ಏಜೆಂಟಾಗಿದ್ದಾರೆ’: ಗೂಂಡೂರಾವ್

ವರದಿಗಾರ (ಜುಲೈ, 10): ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆ ತಾರಕಕ್ಕೇರುತ್ತಿದ್ದು ಆರೋಪ ಪ್ರತ್ಯಾರೋಪಗಳಲ್ಲಿ ರಾಜಕೀಯ ನಾಯಕರು ದಿನ ಮುಂದೂಡುತ್ತಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ‘ರಾಜಭವನವನ್ನು ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ, ರಾಜ್ಯಪಾಲರು ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ’ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಗೆ ಮುಂಬೈ ಹೋಟೆಲ್ ಬಳಿ ತಡೆಯೊಡ್ಡಿದ್ದಾರೆ. ಮುಂಬೈನಲ್ಲಿರುವ ಹೋಟೆಲ್ ಸರ್ಕಾರಿ ಜಾಗ ಅಲ್ಲ, ಅದು ಖಾಸಗಿ ಹೋಟೆಲ್. ಬಿಜೆಪಿ ಪಕ್ಷ ಏನು ಮಾಡುತ್ತಿದೆ ಎಂದು ಗೊತ್ತಾಗುತ್ತಿದೆ. ದೇಶದಲ್ಲಿ ಆಪರೇಷನ್ ಕಮಲಕ್ಕೆ ಕೋಟಿ ಕೋಟಿ ಹಣ ಎಲ್ಲಿಂದ ಬರುತ್ತಿದೆ?’ ಎಂದು ಪ್ರಶ್ನಿಸಿದ್ದಾರೆ.

ಇನ್ನು ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಗೆ ಹೋಗೋದಕ್ಕೆ ಸ್ವತಂತ್ರರು. ಬೋಪಯ್ಯ ರೀತಿ ಸ್ಪೀಕರ್ ರಮೇಶ್ ಕುಮಾರ್ ಅಲ್ಲ. ಬೋಪಯ್ಯ ಹಿಂದೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನರಿಗೆ ಗೊತ್ತಿದೆ. ನಮ್ಮ ಸ್ಪೀಕರ್ ನಿಪ್ಷಕ್ಷಪಾತವಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದ್ದಾರೆ.

 

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group