ರಾಜ್ಯ ಸುದ್ದಿ

ಜನಾದೇಶವನ್ನು ಕಡೆಗಣಿಸುತ್ತಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಗೆ ಜನತೆ ತಕ್ಕ ಪಾಠ ಕಲಿಸಬೇಕು: ಎಸ್.ಡಿ.ಪಿ.ಐ

‘ಬಿಜೆಪಿಯ ಆಮಿಷಗಳಿಗೆ ಬಲಿಯಾಗಿ ರೆಸಾರ್ಟಿನಲ್ಲಿ ಅಡಗಿಕೊಂಡಿರುವುದು ಮತದಾರರಿಗೆ ಬಗೆದ ದ್ರೋಹ’

ವರದಿಗಾರ (ಜುಲೈ,11): ಕರ್ನಾಟಕ ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ತನ್ನ ಅಧಿಕಾರವನ್ನು ಉಳಿಸಲು ಹೆಣಗಾಡುತ್ತಿದ್ದು, ರಾಜ್ಯದ ಆಡಳಿತವನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಈ ಎರಡೂ ಪಕ್ಷಗಳ ಶಾಸಕರು ಅಧಿಕಾರಕ್ಕಾಗಿ ಹಾಗೂ ಸ್ವಾರ್ಥಕ್ಕಾಗಿ ಸರಕಾರವನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದು, ಸರಕಾರವಂತೂ ದಿನಾ ರಾತ್ರಿ ಹಗಲೂ ಶಾಸಕರನ್ನು ತನ್ನ ತಹಬಂದಿಯಲ್ಲಿಟ್ಟುಕೊಳ್ಳಲು ವ್ಯರ್ಥ ಪ್ರಯತ್ನ ನಡೆಸುತ್ತಿದೆ. ಜನತೆಯ ಮತಗಳನ್ನು ಪಡೆದು ಗೆದ್ದುಕೊಂಡ ಶಾಸಕರು ಜನರ ಹಿತಾಸಕ್ತಿಯನ್ನು ಸಂಪೂರ್ಣ ಕಡೆಗಣಸಿ ಬಿಜೆಪಿಯ ಆಮಿಷಗಳಿಗೆ ಬಲಿಯಾಗಿ ರೆಸಾರ್ಟಿನಲ್ಲಿ ಅಡಗಿಕೊಂಡಿರುವುದು ಮತದಾರರಿಗೆ ಬಗೆದ ದ್ರೋಹವೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‍ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಹೇಳಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು ಕಂಗಾಲಾಗಿದ್ದು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರೈತರ ಪರಿಸ್ಥಿತಿಯ ಬಗ್ಗೆ ಯೋಜಿಸಲು ಸರಕಾರಕ್ಕೆ ಸಮಯವಿಲ್ಲದಾಗಿದೆ. ಜಾತ್ಯಾತೀತ ಪಕ್ಷವೆಂದು ಜನತೆ ಮತ ಹಾಕಿದ ಪಕ್ಷಗಳ ಚುನಾಯಿತ ಪ್ರತಿನಿಧಿಗಳು ಯಾವ ಗಳಿಗೆಯಲ್ಲಿ ಬಲಪಂಥೀಯ ಬಿಜೆಪಿಗೆ ಹಾರಲಿದ್ದಾರೆ ಎಂಬ ಬಗ್ಗೆ ಸ್ವಲ್ಪವೂ ಖಾತರಿಯಿಲ್ಲದಂತಾಗಿದೆ. ತಮ್ಮ ಸ್ವಾರ್ಥಕ್ಕಾಗಿ ರಾಜ್ಯದ ಜನತೆಯನ್ನು ಕಡೆಗಣಿಸುತ್ತಿರುವ ಇಂತಹ ರಾಜಕಾರಣಿಗಳಿಗೆ ಮತದಾರರರು ಸೂಕ್ತ ಪಾಠ ಕಲಿಸಬೇಕಾಗಿದೆ ಎಂದು ಇಲ್ಯಾಸ್ ಮುಹಮ್ಮದ್ ತುಂಬೆ ಹೇಳಿದ್ದಾರೆ.

ಬಿಜೆಪಿ ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುತ್ತಿದ್ದು, ಶಾಸಕರ ಖರೀದಿ, ಆಮಿಷ, ರೆಸಾರ್ಟ್ ಬಂಧನ ಇತ್ಯಾದಿಗಳಿಂದ ಸರಕಾರವನ್ನು ಪತನಗೊಳಿಸಲು ಪ್ರಯತ್ನಿಸುತ್ತಿರುವುದು ಅತ್ಯಂತ ಖಂಡನೀಯ. ಅಧಿಕಾರಕ್ಕಾಗಿ ಎಷ್ಟು ಕೆಳಮಟ್ಟಕ್ಕೂ ಇಳಿಯಲು ಹೇಸದ ಬಿಜೆಪಿ ರಾಜ್ಯದ ಜನತೆಗೆ ಸದಾ ಮೋಸ ಮಾಡುತ್ತಲೇ ಇರಲು ಸಾಧ್ಯವಿಲ್ಲ ಎಂದು ತಿಳಿದಿರಲಿ ಎಂದು ಅವರು ಎಚ್ಚರಿಸಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಅಖಂಡ ಭ್ರಷ್ಟಾಚಾರ, ಅಧಿಕಾರದ ದುರುಪಯೋಗ, ಲೈಂಗಿಕ ಹಗರಣಗಳಿಂದ ಸದ್ದು ಮಾಡುತ್ತಾ ಕಾಲ ಕಳೆದಿದ್ದು ಇದೀಗ ಯಾವುದೇ ಅನೀತಿಯುತ ಮಾರ್ಗದಲ್ಲಾದರೂ ಅಧಿಕಾರ ಪಡೆಯಲು ಹರಸಾಹಸ ಪಡುತ್ತಿರುವುದು ಅಕ್ಷಮ್ಯ ಎಂದು ಇಲ್ಯಾಸ್ ತುಂಬೆ ಹೇಳಿದ್ದಾರೆ.

ರಾಜ್ಯವನ್ನು ಕಡೆಗಣಿಸಿದ ಈ ಮೂರು ಪಕ್ಷಗಳಿಗೆ ಮತದಾರರು ಚುನಾವಣೆಯ ಸಂದರ್ಭದಲ್ಲಿ ಸರಿಯಾದ ಪಾಠ ಕಲಿಸಿ ಪ್ರಜಾಪ್ರಭುತ್ವವನ್ನು ಉಳಿಸುವ ಹಾಗೂ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವತ್ತ ಕೈ ಜೋಡಿಸಬೇಕಾಗಿದೆ ಎಂದು ಇಲ್ಯಾಸ್ ತುಂಬೆ ಕರೆ ನೀಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group