ರಾಜ್ಯ ಸುದ್ದಿ

ಸರಕಾರದೊಂದಿಗೆ ಮುನಿಸಿಕೊಂಡು ಹೋಗಿದ್ದ ಎಲ್ಲಾ ಶಾಸಕರು ಅನರ್ಹ: ಸ್ವೀಕರ್ ರಮೇಶ್ ಕುಮಾರ್ ಮಹತ್ವದ ತೀರ್ಪು

‘ಸಂವಿಧಾನಾತ್ಮಕವಾಗಿಯೇ ಕ್ರಮ ಕೈಗೊಂಡಿದ್ದೇನೆ’

ವರದಿಗಾರ (ಜು.28): ಮೈತ್ರಿ ಸರ್ಕಾರದೊಂದಿಗೆ ಮುನಿಸಿಕೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದ ಎಲ್ಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಅನರ್ಹಗೊಂಡಿದ್ದಾರೆ ಎಂದು ಸ್ಪೀಕರ್ ರಮೇಶ್‌ ಕುಮಾರ್ ಹೇಳಿದ್ದಾರೆ.

ಅವರು ವಿಧಾನಸೌಧದಲ್ಲಿ ಇಂದು ಕರೆದ ತುರ್ತು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.

ಈ ಮೂಲಕ ಇದುವರೆಗೆ ಒಟ್ಟು 17 ಶಾಸಕರು ಅನರ್ಹಗೊಂಡಿದ್ದುರಾಜ್ಯದ ರಾಜಕೀಯ ಬೆಳವಣಿಗೆ ಮತ್ತೊಮ್ಮೆ ದೇಶದ ಗಮನ ಸೆಳೆದಿದೆ.

ಕಾಂಗ್ರೆಸ್ ಶಾಸಕರಾದ ಪ್ರತಾಪ್‌ ಗೌಡ ಪಾಟೀಲ (ಮಸ್ಕಿ), ಬಿ.ಸಿ.ಪಾಟೀಲ (ಹಿರೇಕೆರೂರ), ಶಿವರಾಮ ಹೆಬ್ಬಾರ (ಯಲ್ಲಾಪುರ), ಎಸ್‌.ಟಿ.ಸೋಮಶೇಖರ್ (ಯಶವಂತಪುರ), ಬಿ.ಎ.ಬಸವರಾಜ (ಕೆ.ಆರ್.ಪುರ), ಆನಂದ್‌ ಸಿಂಗ್ (ವಿಜಯನಗರ ಬಳ್ಳಾರಿ), ಆರ್.ರೋಶನ್‌ಬೇಗ್ (ಶಿವಾಜಿನಗರ), ಮುನಿರತ್ನ (ರಾಜರಾಜೇಶ್ವರಿನಗರ), ಡಾ.ಕೆ.ಸುಧಾಕರ (ಚಿಕ್ಕಬಳ್ಳಾಪುರ), ಎಂ.ಟಿ.ಬಿ.ನಾಗರಾಜ್ (ಹೊಸಕೋಟೆ), ಶ್ರೀಮಂತ ಬಾಳಾಸಾಹೇಬ್ ಪಾಟೀಲ್ (ಕಾಗವಾಡ) ಮತ್ತು ಜೆಡಿಎಸ್ ಶಾಸಕರಾದ ಎ.ಎಚ್.ವಿಶ್ವನಾಥ್ (ಹುಣಸೂರು), ಕೆ.ಸಿ.ನಾರಾಯಣಗೌಡ (ಕೆ.ಆರ್.ಪೇಟೆ), ಕೆ.ಗೋಪಾಲಯ್ಯ (ಮಹಾಲಕ್ಷ್ಮಿ ಲೇಔಟ್) ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ರಮೇಶ್‌ಕುಮಾರ್ ಹೇಳಿದರು.

ಗುರುವಾರವಷ್ಟೇ (ಜುಲೈ 25) ಶಾಸಕರಾದ ಮಹೇಶ್ ಕುಮಠಳ್ಳಿ (ಅಥಣಿ), ರಮೇಶ ಜಾರಕಿಹೊಳಿ (ಗೋಕಾಕ), ಆರ್.ಶಂಕರ್ (ರಾಣೆಬೆನ್ನೂರು) ಅವರನ್ನು ಅನರ್ಹಗೊಳಿಸಿ ರಮೇಶ್‌ಕುಮಾರ್ ಆದೇಶಿಸಿದ್ದರು.

‘ಸ್ಪೀಕರ್ ಆಗಿರುವ ಕಾರಣಕ್ಕೆ ನನ್ನ ಮೇಲೆ ಮಾನಸಿಕ ಒತ್ತಡ ಹಾಕಲಾಗಿದೆ. ಖಿನ್ನನಾಗಿದ್ದಾನೆ. ಇದು ನನ್ನ ನಾಲ್ಕು ದಶಕಗಳ ಜೀವನದ ಪ್ರಮುಖ ಘಟ್ಟ, ಬಹುಶಃ ಕೊನೆಯ ಘಟ್ಟವೂ ಆಗಬಹುದು. ಅತ್ಯಂತ ಭಯ, ಗೌರವ, ಜವಾಬ್ದಾರಿಯನ್ನು ಹೊಟ್ಟೆಯಲ್ಲಿಟ್ಟುಕೊಂಡು ನಾನು ಈ ತೀರ್ಮಾನಕ್ಕೆ ಬಂದಿದ್ದೇನೆ’ ಎಂದು ರಮೇಶ್‌ಕುಮಾರ್ ತೀರ್ಪು ಓದಿದರು

 

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group