ರಾಜ್ಯ ಸುದ್ದಿ

ಸ್ವೀಕರ್ ರಮೇಶ್ ಕುಮಾರ್ ರಾಜೀನಾಮೆ

‘ಸಭಾಧ್ಯಕ್ಷರ ಸ್ಥಾನದ ಘನತೆ, ಗೌರವಕ್ಕೆ ಧಕ್ಕೆಯಾಗದಂತೆ ಜವಾಬ್ದಾರಿ ನಿರ್ವಹಿಸಿದ್ದೇನೆ’

‘ಸಣ್ಣಪುಟ್ಟ ಘಟನೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ’

ವರದಿಗಾರ (ಜು.29): ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ರಮೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದಾರೆ. ಅವರು ಇಂದು ಸದನದಲ್ಲೇ ತಮ್ಮ ಸ್ಥಾನದ ರಾಜೀನಾಮೆ ಪತ್ರವನ್ನು ನೀಡಿದರು. ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ ಅವರಿಗೆ ಸಭಾಧ್ಯಕ್ಷ ಸ್ಥಾನದ ರಾಜೀನಾಮೆ ಪತ್ರ ನೀಡಿ ನಿರ್ಗಮಿಸಿದ್ದಾರೆ.  ಒಬ್ಬ ಪ್ರಬುದ್ಧ ಸಭಾಕ್ಷರಾಗಿ ಇದುವರೆಗೆ ಸದನವನ್ನು ಮುನ್ನಡೆಸಿದ ರಮೇಶ್ ಕುಮಾರ್ ರವರ ರಾಜೀನಾಮೆ ರಾಜ್ಯಕ್ಕೆ ಬಹುದೊಡ್ಡ ನಷ್ಟವೆಂದು ವ್ಯಾಖ್ಯಾನಿಸಲಾಗಿದೆ. ಅವರ ರಾಜೀನಾಮೆಯಿಂದ ಹಲವರು ಕಣ್ಣೀರು ಹಾಕಿರುವುದೂ ಕಂಡು ಬಂದಿದೆ.

ಸಾಂವಿಧಾನಿಕ ನಿಷ್ಠವಾಗಿ, ಆತ್ಮಸಾಕ್ಷಿಗನುಗುಣವಾಗಿ ಶಕ್ತಿ ಮೀರಿ ಸಭಾಧ್ಯಕ್ಷರ ಕರ್ತವ್ಯವನ್ನು ನಿರ್ವಹಿಸಿರುವುದಾಗಿ ಅವರು ಈ ಸಂದರ್ಭ ಹೇಳಿದ್ದಾರೆ. ಸಭಾಧ್ಯಕ್ಷರ ಸ್ಥಾನ ದೊಡ್ಡದು. ನಾವು ಸಣ್ಣವರು. ಜಾಗೃತಿಯಿಂದ ಸಭಾಧ್ಯಕ್ಷರ ಸ್ಥಾನಕ್ಕೆ ಅಪಚಾರವಾಗದಂತೆ ಕೆಲಸ ಮಾಡಬೇಕಾಗಿದೆ. ಸಭಾಧ್ಯಕ್ಷರ ಸ್ಥಾನದ ಘನತೆ, ಗೌರವಕ್ಕೆ ಧಕ್ಕೆಯಾಗದಂತೆ ಜವಾಬ್ದಾರಿ ನಿರ್ವಹಿಸಿರುವುದಾಗಿ ತಿಳಿಸಿದರು.

ಸಣ್ಣಪುಟ್ಟ ಘಟನೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ಸಭಾಧ್ಯಕ್ಷರ ಜವಾಬ್ದಾರಿಯಿಂದ ಬಿಡುಗಡೆ ಹೊಂದಬೇಕೆಂದು ನಿರ್ಧರಿಸಿದ್ದೇನೆ. ನಮ್ಮ ಕುಟುಂಬ ನಿರೀಕ್ಷಿಸಿದ್ದೇ ಬೇರೆ, ಆದರೆ ಆಗಿದ್ದೇ ಬೇರೆ.

ತಾನು ವಿದ್ಯಾರ್ಥಿ ದೆಸೆಯಲ್ಲಿದ್ದಾಗ ಆಗಿನ ಮುಖ್ಯಮಂತ್ರಿ ದೇವರಾಜ ಅರಸುರವರಿಂದ ಪ್ರೇರಣೆಯಾಗಿ ರಾಜಕೀಯ ಪ್ರವೇಶ ಮಾಡಿದ್ದಾಗಿ ಹೇಳಿದ ಅವರು, ಈ ಕ್ಷಣವೇ ಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಪ್ರಕಟಿಸಿದರು. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೂಲಕ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದ್ದಾರೆ.

14 ತಿಂಗಳು, 4 ದಿನ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಮುಖ್ಯಮಂತ್ರಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು, ಸಚಿವಾಲಯದ ಸಿಬ್ಬಂದಿ, ಮಾಧ್ಯಮಗಳಿಗೆ ಅವರು ಕೃತಜ್ಞತೆಯನ್ನು ಅರ್ಪಿಸಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮನವಿಗೆ ಸ್ಪಂದಿಸಿ ಸಭಾಧ್ಯಕ್ಷರಾಗಲು ಒಪ್ಪಿದೆ. ಸಭಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಸುರೇಶ್‍ಕುಮಾರ್ ಅವರನ್ನು ಸಭಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ತೀರ್ಮಾನಿಸಲಾಗಿತ್ತು. ಆದರೆ ನಿಮ್ಮನ್ನು ಸರ್ವಾನುಮತದಿಂದ ಆಯ್ಕೆ ಮಾಡಲು ಸಹಕರಿಸುತ್ತೇವೆ ಎಂದಿದ್ದರು. ಅವರ ಸೌಜನ್ಯಕ್ಕೂ ಋಣಿಯಾಗಿರುವುದಾಗಿ ಹೇಳಿದರು.

ಸಾರ್ವಜನಿಕ ಜೀವನದ ವೈಯಕ್ತಿಕ ವಿಚಾರವನ್ನು ರೋಚಕ ಮಾಡಿ ಅವರ ಕುಟುಂಬ ಮತ್ತು ಸಂಬಂಧಿಕರಿಗೆ ನೋವುಂಟು ಮಾಡಬೇಡಿ ಎಂದು ಮಾಧ್ಯಮಗಳಿಗೆ ಕಿವಿ ಮಾತಿನ ಮೂಲಕ ಸಲಹೆ ನೀಡಿದ್ದಾರೆ.

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group