ರಾಜ್ಯ ಸುದ್ದಿ

ಎಸ್.ಡಿ.ಪಿ.ಐ, ಪಾಪ್ಯುಲರ್ ಫ್ರಂಟ್ ನೆರೆ ಪರಿಹಾರ ಕಾರ್ಯಾಚರಣೆಗೆ ವ್ಯಾಪಕ ಪ್ರಶಂಸೆ

ವರದಿಗಾರ (ಆ.10) : ರಾಜ್ಯದ ಬಹುತೇಕ ಜಿಲ್ಲೆಗಳು ಭೀಕರ ಮಳೆಯಿಂದ ಕಂಗೆಟ್ಟಿದ್ದು, ಹಲವು ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದೆ. ಈ ಮಧ್ಯೆ ಎಸ್.ಡಿ.ಪಿ.ಐ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಲ್ಲಿ ನೆರೆ ಸಂತ್ರಸ್ತರ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಗಣನೀಯ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಇವರ ಮಾನವೀಯ ಸೇವೆಯನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಫರಂಗಿಪೇಟೆ ಆಸುಪಾಸಿನ ಕುಂಜತ್ಕಳ, ಪುಂಚಮೆ, ಅಮೆಮಾರ್ ಮತ್ತು ಕುಂಪನಮಜಲು ಪರಿಸರದ ತಗ್ಗು ಪ್ರದೇಶಗಳಲ್ಲಿ ನೀರಿನ ಹರಿವು ಜಾಸ್ತಿಯಾದ ಕಾರಣ ಸುಮಾರು 40 ರಷ್ಟು ಮನೆಗಳು ಜಲಾವೃತಗೊಂಡಿದ್ದವು ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳನ್ನು ಮತ್ತು ಮನೆಯ ಸಾಮಗ್ರಿಗಳನ್ನು ಸ್ಥಳಾಂತರಗೊಳಿಸುವ ಸಲುವಾಗಿ ಎಸ್.ಡಿ.ಪಿ.ಐ ಮತ್ತು ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ನೆರೆ ಸಂತ್ರಸ್ತರಿಗೆ ಸಹಾಯಕ ಮಿತ್ರರಾಗಿ ಸೇವೆ ಸಲ್ಲಿಸಿದ್ದಾರೆ. ಈ ಕಾರ್ಯಾಚರಣೆಯ ನೇತೃತ್ವವನ್ನು ಎಸ್.ಡಿ.ಪಿ.ಐ ಗ್ರಾಮ ಸಮಿತಿ ಅಧ್ಯಕ್ಷ ಇಕ್ಬಾಲ್ ಅಮೆಮಾರ್ ಮತ್ತು ಪಾಪ್ಯುಲರ್ ಫ್ರಂಟ್ ವಲಯ ಅಧ್ಯಕ್ಷರಾದ ನಿಸಾರ್ ವಳವೂರು ರವರು ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ನಝೀರ್ ಹತ್ತನೇ ಮೈಲು ಕಲ್ಲು,ಸಲೀಂ ಕುಂಪನಮಜಲು, ಪುತ್ತುಬಾವ ಫರಂಗಿಪೇಟೆ, ಶಾಫಿ ಅಮೆಮಾರ್, ಶೆರೀಫ್ ಕುಂಪನಮಜಲು ಮತ್ತು ಇತರರು ಉಪಸ್ಥಿತರಿದ್ದರು.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಸೆಲೀಂ ಕುಂಪನಮಜಲ್ ಪುದು ಗ್ರಾಮದಲ್ಲಿ ಮಳೆಯು ನಿರಂತರವಾಗಿ ಸುರಿಯುತ್ತಿದ್ದು ಗ್ರಾಮ ಪಂಚಾಯತ್ ವತಿಯಿಂದ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇನ್ನಷ್ಟು ತಗ್ಗು ಪ್ರದೇಶಗಳು ಜಲಾವೃತಗೊಳ್ಳುವ ಸಾಧ್ಯತೆ ಇರುವುದರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಕೂಡಲೇ ತಮ್ಮ ವಾಸ್ತವ್ಯವನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರಿಸಲು ಸಲಹೆಯನ್ನು ನೀಡಿದರು ಹಾಗೂ ಯಾವುದೇ ಸಂದರ್ಭದಲ್ಲೂ ನೆರೆ ಪರಿಹಾರ ಕಾರ್ಯಾಚರಣೆಯನ್ನು ನಡೆಸಲು ಎಸ್.ಡಿ.ಪಿ.ಐ ಮತ್ತು ಪಾಪ್ಯುಲರ್ ಫ್ರಂಟ್ ರೆಸ್ಕ್ಯೂ ತಂಡದ ಸದಸ್ಯರು ಸನ್ನದ್ಧರಾಗಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಗ್ರಾಮ ಲೆಕ್ಕಾಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದು ಕೊಂಡರು.

ಈ ಸಂದರ್ಭದಲ್ಲಿ ಗ್ರಾಮ ವ್ಯಾಪ್ತಿಯಿಂದ ಹೊರಗಿದ್ದ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆಯವರು ತಾಲೂಕು ಮತ್ತು ಜಿಲ್ಲಾ ಮಟ್ಟದ ಸರಕಾರಿ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದಾಗ ಎಸ್.ಡಿ.ಪಿ.ಐ ಮತ್ತು ಪಾಪ್ಯುಲರ್ ಫ್ರಂಟ್ ಕಾರ್ಯಾಚರಣೆಯನ್ನು ಶ್ಲಾಘಿಸಿ ಇನ್ನು ಮುಂದಿನ ಎಲ್ಲಾ ನೆರೆ ಪರಿಹಾರ ಕಾರ್ಯಾಚರಣೆಯಲ್ಲಿ ಜಿಲ್ಲಾಡಳಿತವು ನೇರ ಸಹಕಾರ ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂಬ ಮಾಹಿತಿಯು ಮೂಲಗಳಿಂದ ಬಂದಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group