ಜಿಲ್ಲಾ ಸುದ್ದಿ

ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮತಾಂಧನ ವಿರುದ್ಧ ಪ್ರಕರಣ ದಾಖಲು ಮಾಡಿಸಿದ SDPI

ವರದಿಗಾರ : ವಿಕ್ರಂ ದಾಸ್ ವಿಕ್ರಂ (ವಿಕ್ಕಿ) ಎಂಬ ಹೆಸರಿನ ಮತಾಂಧನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಇಸ್ಲಾಂ ಧರ್ಮದ ಬಗ್ಗೆ, ಮುಸ್ಲಿಮರ ಬಗ್ಗೆ ಮತ್ತು ಮುಸ್ಲಿಂ ಮಹಿಳೆಯರ ಬಗ್ಗೆ ಅವಾಚ್ಯವಾದ ಶಬ್ದಗಳಿಂದ ನಿಂದನೆ ಮಾಡಿ ಅವಹೇಳನಕಾರಿ ಮಾತುಗಳನ್ನಾಡಿ, ಇಸ್ಲಾಂ ಧರ್ಮದ ದೇವರ ಹೆಸರನ್ನು ಉಲ್ಲೇಖಿಸಿ ಅಪಮಾನ ಮಾಡಿ ಆ ಆಡಿಯೋವನ್ನು ವೈರಲ್ ಮಾಡಿರುತ್ತಾನೆ.

ಈ ಬಗ್ಗೆ ಇವನ ವಿರುದ್ಧ ಕಠಿಣ ಕ್ರಮ ಜರಗಿಸಿ ಬಂಧಿಸುವಂತೆ ಆಗ್ರಹಿಸಿ ಎಸ್ ಡಿಪಿಐ(SDPI) ಪಾಂಡೇಶ್ವರ ವಾರ್ಡ್ ಸಮಿತಿಯ ಸದಸ್ಯ ವಾಜಿದ್ ರವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 17 ರಂದು ಈತನ ಬಗ್ಗೆ ದೂರು ದಾಖಲಿಸಿದ್ದಾರೆ. ಅದರಂತೆ ಕ್ರೈಂ. ನಂ-0179/2019 ಐಪಿಸಿ-1860(U/s-153A,504,506)ಸೆಕ್ಷನ್ ಅಡಿಯಲ್ಲಿ FIR ದಾಖಲಾಗಿದೆ.


ಪೊಲೀಸ್ ಇಲಾಖೆ ಕೂಡಲೇ ಈತನನ್ನು ಬಂಧಿಸಿ ಇದರ ಹಿಂದಿರುವ ಷಡ್ಯಂತ್ರವನ್ನು ಬಯಲಿಗೆಳೆಯ ಬೇಕು ಎಂದು ಎಸ್ ಡಿ ಪಿ ಐ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಸುಹೈಲ್ ಖಾನ್ ಒತ್ತಾಯಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group