ರಾಜ್ಯ ಸುದ್ದಿ

ಪ್ರಚಾರ ಸಿಗುವುದಿಲ್ಲವೆಂದು ಪ್ರವಾಹ ಪೀಡಿತ ಸ್ಥಳಗಳಿಗೆ ಪ್ರಧಾನಿ ಮೋದಿ ಭೇಟಿ ನೀಡಿಲ್ಲ: ಸಿದ್ದರಾಮಯ್ಯ ಆಕ್ರೋಶ

‘ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ’

‘ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ’

ವರದಿಗಾರ (ಆ.28): ‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಚಾರದ ಗೀಳು ಎಷ್ಟರ ಮಟ್ಟಿಗೆ ಇದೆಯೆಂದರೆ ಯಾವ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಹೆಚ್ಚು ಹೆಚ್ಚು ಪ್ರಚಾರ ದೊರೆಯುತ್ತದೆಯೋ ಅಂಥದ್ದರಲ್ಲಿ ಮಾತ್ರ ಅವರಿಗೆ ಆಸಕ್ತಿಯಿರುತ್ತದೆ. ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ, ವೈಮಾನಿಕ‌ ಸಮೀಕ್ಷೆ ಇವುಗಳಿಂದ ಪ್ರಚಾರ ದೊರೆಯದ ಕಾರಣ ಅವರು ರಾಜ್ಯಕ್ಕೆ ಬರುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿ ಪ್ರವಾಹ ಪೀಡಿತ ಸ್ಥಳಗಳಿಗೆ ಪ್ರಧಾನಿ ಮೋದಿ ಭೇಟಿ ನೀಡದೇ ಇರುವುದರ  ವಿರುದ್ಧ ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಪದೇ ಪದೇ ವಿದೇಶಕ್ಕೆ ಹೋಗುವ ಪ್ರಧಾನಿ ಮೋದಿ ಅವರಿಗೆ ತಮ್ಮದೇ ದೇಶದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಸಮಯವಿಲ್ಲ. ವಿದೇಶಕ್ಕೆ ಹೋಗುವುದು ತಪ್ಪಲ್ಲ, ಆದರೆ ಎಲ್ಲಕ್ಕಿಂತ ಮೊದಲು ದೇಶದ ಪ್ರಜೆಗಳ ಕಷ್ಟ ಕೇಳಬೇಕಲ್ಲವೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತನ್ನ ಮತ್ತೊಂದು ಟ್ವೀಟ್ ನಲ್ಲಿ, ‘ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ನಾವು ಫೆಬ್ರವರಿಯಲ್ಲಿ ಬರ ಪರಿಹಾರ ನೀಡುವಂತೆ ಸಲ್ಲಿಸಿದ್ದ ಮನವಿಗೆ ಕಳೆದ ವಾರ ಕೇಂದ್ರ ರೂ.1,029 ಕೋಟಿ ಅನುದಾನ ನೀಡಿದೆ. ರಾಜ್ಯದಲ್ಲಿ ಪ್ರವಾಹ ಬಂದು 20 ದಿನಗಳಾದರೂ ಕೇಂದ್ರದಿಂದ ನಯಾಪೈಸೆಯೂ ಬಿಡುಗಡೆಯಾಗಿಲ್ಲ. ಇವರದು ಬಡವರ ವಿರೋಧಿ ಸರ್ಕಾರವಲ್ಲದೆ ಬೇರೇನು? ಎಂದೂ ಅವರು ಪ್ರಶ್ನಿಸಿದ್ದಾರೆ.

‘ಭಾವನಾತ್ಮಕ ವಿಚಾರಗಳ ಮೇಲೆಯೇ ರಾಜಕಾರಣ ಮಾಡುತ್ತಾ ಹೋದರೆ ಜನರ ನೈಜ ಸಮಸ್ಯೆಗಳಾದ ನಿರುದ್ಯೋಗ, ಬಡತನ, ಅನಕ್ಷರತೆ, ಹಸಿವು ಇವುಗಳನ್ನು ಬಗೆಹರಿಸುವವರಾರು? ಜನರ ಅನುಕಂಪ ಗಳಿಸುವುದು, ಪ್ರಚಾರ ಪಡೆಯುವುದು, ಭಾವನಾತ್ಮಕವಾಗಿ ಮರುಳು ಮಾಡುವುದು ಸರ್ಕಾರದ ಕರ್ತವ್ಯವಲ್ಲ, ದುರಂತವೆಂದರೆ ಕೇಂದ್ರ ಸರ್ಕಾರ ಇದನ್ನು ಬಿಟ್ಟು ಬೇರೇನೂ ಮಾಡುತ್ತಿಲ್ಲ’ ಎಂದು ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದಿದ್ದಾರೆ.

‘ನಮ್ಮದು ಹೈಕಮಾಂಡ್ ಪಕ್ಷ ಅಲ್ಲ ಅಂದಿದ್ದ ಬಿಜೆಪಿ ನಾಯಕರು ಈಗ ಮಾಡುತ್ತಿರುವುದು ಏನು? ವಾರದಲ್ಲಿ 3 ದಿನ ದೆಹಲಿಗೆ ಓಡಿ ಹೋಗುತ್ತಿದ್ದಾರೆ. ಅಮಿತ್ ಶಾ ಅನುಮತಿಯಿಲ್ಲದೆ ಯಡಿಯೂರಪ್ಪನವರು ಏನೂ ಮಾಡದಂತಹ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಪ್ರತಿಯೊಂದಕ್ಕೂ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾಗಿದೆ. ಇದೇ ಬಿಜೆಪಿಗರ ನಿಜಬಣ್ಣ’ ಎಂದು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group