ರಾಜ್ಯ ಸುದ್ದಿ

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬುವುದಕ್ಕೆ ಜಿಲ್ಲಾಧಿಕಾರಿ ಸೆಂಥಿಲ್ ರಾಜೀನಾಮೆಯೇ ಸಾಕ್ಷಿ: ಎಸ್‍ಡಿಪಿಐ

ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸುವಂತೆ ಮತ್ತು ಫ್ಯಾಸಿಸ್ಟ್ ವಿರೋಧಿ ಶಕ್ತಿಗಳು ಒಂದಾಗುವಂತೆ ಇಲ್ಯಾಸ್ ಮುಹಮ್ಮದ್ ಕರೆ

ವರದಿಗಾರ (ಸೆ.7): ಕೇಂದ್ರದಲ್ಲಿ ಮೋದಿ ಎರಡನೇ ಬಾರಿ ಅಧಿಕಾರವನ್ನು ಪಡೆದ ನಂತರ ದೇಶದಲ್ಲಿರುವ ವಿರೋಧ ಪಕ್ಷಗಳನ್ನು ನಿಯಂತ್ರಿಸುವ ಪ್ರಕ್ರಿಯೆಯ ಮುಂದುವರಿದ ಭಾಗವಾಗಿ ಕೆಲ ನಿರ್ದಿಷ್ಟ ಇಲಾಖೆಗಳನ್ನು ಹಾಗೂ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನಿಯಂತ್ರಿಸಲು ಹೊರಟಿರುವ ಕೇಂದ್ರ ಸರಕಾರದ ನಡೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಅಲ್ಲದೇ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‍ರವರ ರಾಜೀನಾಮೆಯೇ ಸಾಕ್ಷಿ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್‍ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಹೇಳಿದ್ದಾರೆ.

ಇಂತಹ ಸಂದಿಗ್ನ ಪರಿಸ್ಥಿತಿಯಲ್ಲಿ ನಾವು ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸಬೇಕು. ನಿರಂಕುಶ ಪ್ರವೃತ್ತಿಯನ್ನು ವಿರೋಧಿಸಬೇಕು. ಇದಕ್ಕಾಗಿ ಫ್ಯಾಸಿಸ್ಟ್ ವಿರೋಧಿ ಶಕ್ತಿಗಳು ಒಂದಾಗಬೇಕು. ಆದರೆ ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವ ನಿಟ್ಟಿನಲ್ಲಿ ನಾವು ಒಂದಾಗದಿರುವುದು ಸಹ ಪ್ರಜಾಪ್ರಭುತ್ವಕ್ಕೆ ದೊಡ್ಡ ಸವಾಲಾಗಿದೆ ಎಂದು ಅವರು ಅಭಿಪ್ರಾಯಿಸಿದ್ದಾರೆ. ಕೇಂದ್ರ ಸರಕಾರ ಲೋಕಸಭೆಯಲ್ಲಿ ಯಾವುದೇ ಮುಕ್ತ ಚರ್ಚೆಗೆ ಅವಕಾಶ ನೀಡದೆ ಹಲವಾರು ಮಸೂದೆಗಳನ್ನು ಏಕಪಕ್ಷೀಯವಾಗಿ ಜಾರಿ ಮಾಡುತ್ತಿರುವುದು ಸಹ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡುವ ಉದ್ದೇಶದಿಂದ ಎಂಬುವುದನ್ನು ನಾವು ಅರಿತುಕೊಳ್ಳಬೇಕಾಗಿದೆ. ವಿವಿಧತೆಯಲ್ಲಿ ಏಕತೆ ಎಂಬ ಪರಿಕಲ್ಪನೆಯನ್ನು ದೇಶದ ಸಂವಿಧಾನದ ಆಶಯ. ಈ ಆಶಯವನ್ನು ಈಡೇರಿಸಲು ಜನಾಂದೋಲನದ ಅನಿವಾರ್ಯತೆಯಿದೆ. ಈ ಜನಾಂದೋಲನದ ಆರಂಭವು ಕರ್ನಾಟಕದಿಂದಲೇ ಪ್ರಾರಂಭವಾಗಲಿ ಎಂದು ಇಲ್ಯಾಸ್ ತುಂಬೆ ಕರೆ ನೀಡಿದ್ದಾರೆ.

Deputy Commissioner Senthil’s Resignation is witness to Democracy is in Danger: Elyas Muhammad Thumbe SDPI

The ongoing spree of targeting and restraining certain government Departments and the bureaucrats by the Modi regime is disastrous to democracy of the country. Social Democratic Party of India, Karnataka state President Elyas Muhammad Thumbe said that the resignation of Deputy Commissioner of Dakshina Kannada Sasikanth Senthil is the proof that Democracy of our country is in Danger.

He said, at this juncture, we should fight against such dictatorship and authoritarian rule. Meanwhile all anti-communal forces should unite. However, the disunity among us against defeating fascist elements is a challenge to democracy. The central government passing the bills without giving room to open discussion in the Parliament is nothing but uprooting the democracy.

Elyas Muhammad Thumbe said, unity in diversity is the ideals of Indian democracy. To fulfil this ideal, a massive peoples movement shall be evolved. Elyas Muhammad said let the movement start from Karnataka.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group