ರಾಜ್ಯ ಸುದ್ದಿ

ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡುವಂತಹ ಅನಿವಾರ್ಯತೆಗೆ ಸಿಲುಕಿಸಿದವರು ಯಾರು? ಪ್ರಶ್ನಿಸಿದ ವುಮೆನ್ ಇಂಡಿಯಾ

‘ಮೋದಿ ಸರಕಾರದ ಪ್ರಥಮ ಅವಧಿಯಲ್ಲಿಯೇ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು’

ವರದಿಗಾರ (ಸೆ.7): ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿರುವ ಎಸ್.ಸಸಿಕಾಂತ್ ಸೆಂಥಿಲ್‍ರವರು ಐಎಎಸ್ ಸೇವೆಗೆ ಹಠಾತ್ ರಾಜೀನಾಮೆ ಸಲ್ಲಿಸಿರುವುದು ದೇಶದ ಜನತೆಯನ್ನೇ ಆಘಾತಕ್ಕೀಡು ಮಾಡಿದೆ ಎಂದು ವುಮೆನ್ ಇಂಡಿಯಾ ಮೂವ್‍ಮೆಂಟ್(ವಿಮ್) ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಂ ಪ್ರತಿಕ್ರಿಯಿಸಿದ್ದಾರೆ.

ದಕ್ಷ, ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಯ ರಾಜೀನಾಮೆಯ ಹಿಂದೆ ಹಲವು ಸಂಶಯಗಳು ವ್ಯಕ್ತವಾಗುತ್ತಿದ್ದು, ಈ ಸಂಶಯವನ್ನು ನಿವಾರಿಸುವುದು ಸರಕಾರದ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

ದೇಶದಾದ್ಯಂತ ದಕ್ಷ ಅಧಿಕಾರಿಗಳು ಒತ್ತಡ, ಆಮಿಷ ಮತ್ತು ಬೆದರಿಕೆಗಳು ಅವರ ಸ್ವಾಭಿಮಾನಕ್ಕೆ ದಕ್ಕೆ ತರುವುದಿಲ್ಲವೆಂದು ರಾಜೀನಾಮೆ ಸಲ್ಲಿಸುತ್ತಾ ಬರುತ್ತಿದ್ದಾರೆ. ಇಂತಹ ಅಧಿಕಾರಗಳನ್ನು ಕಾಣದ ಕೈಗಳು ನಿಯಂತ್ರಿಸುತ್ತಿದೆ ಎಂಬುವುದಕ್ಕೆ ಸೆಂಥಿಲ್ ರವರ ರಾಜೀನಾಮೆ ಸ್ಪಷ್ಟ ಉದಾಹರಣೆಯಾಗಿದೆ.

ಮೋದಿ ಸರಕಾರದ ಪ್ರಥಮ ಅವಧಿಯಲ್ಲಿಯೇ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮಾಧ್ಯಮಗಳ ಮುಂದೆ ಎಚ್ಚರಿಸಿರುವುದನ್ನು ಗಮನಿಸಬೇಕಾಗಿದೆ. ಪ್ರಜಾಪ್ರಭುತ್ವದ ಕಗ್ಗೊಲೆಗಾಗಿ ಮೋದಿ ಸರಕಾರವು ಸ್ವಾಯತ್ತ ಸಂಸ್ಥೆಗಳನ್ನು ನಿಯಂತ್ರಣದಲ್ಲಿರಿಸಿರುವುದು ಖಂಡನೀಯವಾಗಿದೆ. ಜೊತೆಗೆ ಕುಸಿಯುತ್ತಿರುವ ದೇಶದ ಆರ್ಥಿಕತೆಯು ಜನರನ್ನು ಸಂಕಷ್ಟಕ್ಕೀಡುಮಾಡಿದೆ. ಕಾಶ್ಮೀರವನ್ನೊಳಗೊಂಡಂತೆ ಮಹಿಳೆಯರು, ಮಕ್ಕಳು ಎನ್ನದೆ ನಾಗರಿಕರು ಅಭ್ರದ್ರತೆಯಲ್ಲಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ದ.ಕ. ಜಿಲ್ಲಾಧಿಕಾರಿಯಂತಹ ದಕ್ಷ ಅಧಿಕಾರಿಗಳು ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಎನ್ನುತ್ತಿರುವುದು ದೇಶವು ಅಪಾಯದತ್ತ ಸಾಗುತ್ತಿದೆ ಎಂಬುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ ಎಂದು ಹೇಳಿದ್ದಾರೆ.

ಆದ್ದರಿಂದ ಸಸಿಕಾಂತ್ ರವರಿಗೆ ರಾಜೀನಾಮೆ ನೀಡುವಂತಹ ಅನಿವಾರ್ಯತೆಗೆ ಸಿಲುಕಿರುವ ಸನ್ನಿವೇಶವನ್ನು ನಿರ್ಮಿಸಿದವರು ಯಾರು? ಎಂಬ ಪ್ರಶ್ನೆಗೆ ಉತ್ತರ ದೇಶದ ಜನತೆಗೆ ತಿಳಿಯಬೇಕಾಗಿದೆ. ದಕ್ಷ ಅಧಿಕಾರಿಗಳು ಮುಕ್ತವಾಗಿ ಸೇವೆ ಸಲ್ಲಿಸಲು ಅನುವು ಮಾಡಿಕೊಡುವಂತೆ ಮತ್ತು ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಅಧಿಕಾರವನ್ನು ದುರುಪಯೋಗಪಡಿಸುವಂತೆ ಮಾಡುತ್ತಿರುವ ಕಾಣದ ಕೈಗಳನ್ನು ಕಾನೂನಿನ ಮುಂದೆ ತರುವಂತೆ ವುಮೆನ್ ಇಂಡಿಯಾ ರಾಜ್ಯಾಧ್ಯಕ್ಷೆ ಶಾಹಿದಾ ತಸ್ನೀಂ ಸರಕಾರವನ್ನು ಒತ್ತಾಯಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group