ರಾಜ್ಯ ಸುದ್ದಿ

ರೈತರ ಸಮಸ್ಯೆಯನ್ನು ಬಗೆಹರಿಸದ ಸರಕಾರದ ವಿರುದ್ಧ ಎಚ್ಚೆತ್ತ ರೈತ ಸಂಘ; ಮುಖ್ಯಮಂತ್ರಿ ಮನೆಗೆ ಮುತ್ತಿಗೆಗೆ ಡೇಟ್ ಫಿಕ್ಸ್

ವರದಿಗಾರ (ಅ.29): ರಾಜ್ಯದಲ್ಲಿ ನಿರಂತರವಾಗಿ ಬರಗಾಲ ಮತ್ತು ಪ್ರವಾಹದಿಂದ ನಷ್ಟ ಅನುಭವಿಸಿದ ರೈತರಿಗೆ ಸರಿಯಾದ ಪರಿಹಾರ ನೀಡಿಲ್ಲವೆಂದು ಸರಕಾರದ ವಿರುದ್ಧ ಎಚ್ಚೆತ್ತ ರೈತ ಸಂಘವು ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ದಿನಾಂಕ ನಿಗದಿ ಮಾಡಿದೆ.

ಈ ಬಗ್ಗೆ ಮಾತನಾಡಿರುವ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ‘ಮುಖ್ಯಮಂತ್ರಿಗಳು ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುವುದಾಗಿ 15 ದಿನಗಳ ಕಾಲಾವಕಾಶ ಪಡೆದು ನೆರೆ ಸಂತ್ರಸ್ತರ ಸಮಸ್ಯೆಗಳ ಪರಿಹರಿಸುವ ಕಡೆ ಗಮನ ಹರಿಸದೆ ತಿರಸ್ಕಾರ ಮನೋಭಾವನೆಯಿಂದ ನೋಡುತ್ತಿರುವುದನ್ನು ವಿರೋಧಿಸಿ ನವೆಂಬರ್ 07ರಂದು ಬೆಳಗ್ಗೆ 11 ಗಂಟೆಗೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿಯಿಂದ ಮುಖ್ಯಮಂತ್ರಿಗಳ ಮನೆಗೆ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರೈತರ ಅನೇಕ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡಿದ ಸಮಯದಲ್ಲಿ ಮುಖ್ಯಮಂತ್ರಿಗಳು 15 ದಿನಗಳ ಒಳಗೆ ಸಂತ್ರಸ್ತರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವುದಾಗಿ ಮಾತು ನೀಡಿದ್ದರ ಮೇರೆಗೆ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. 15 ದಿನ ಕಳೆದರು ಸರ್ಕಾರ ಸಂತ್ರಸ್ತರ ಬಗ್ಗೆ ತಿರಸ್ಕಾರ ಮನೋಭಾವ ಮುಂದುವರಿಸಿದೆ. ಮತ್ತೆ ಪ್ರವಾಹ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರದಿಂದ ಹಣ ಬಂದಿದೆ ಎಂದು ಹೇಳಿಕೊಂಡು ಓಡಾಡಿ ಕೊಂಡು ರೈತರನ್ನು ಮರೆತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದಲ್ಲಿ ನೆರೆ ಪ್ರವಾಹದಿಂದ 4,394 ಗ್ರಾಮಗಳು ಮುಳುಗಡೆಯಾಗಿ 2.5 ಲಕ್ಷಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ನೆಲಸಮವಾಗಿರುತ್ತವೆ. ಪ್ರವಾಹದಿಂದ 15ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಭೂ ಕುಸಿತದಿಂದ ರೈತರ ಭೂಮಿಯೇ ಇಲ್ಲವಾಗಿದೆ. ಲಕ್ಷಾಂತರ ಏಕರೆ ಕೃಷಿ ಭೂಮಿಯ ಮೇಲ್ಪದರವು ನೀರಿನಲ್ಲಿ ಕೊಚ್ಚಿ ಹೋಗಿದೆ. ಭೂಮಿಯನ್ನು ಹದಮಾಡಲು ಸುಮಾರು ವರ್ಷಗಳೇ ಬೇಕು. ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡದೆ ಗಂಜಿ ಕೇಂದ್ರಗಳನ್ನು ಮುಚ್ಚಲಾಗಿದೆ. ಸರ್ವಸ್ವವನ್ನೂ ಕಳೆದುಕೊಂಡು ಬೀದಿಗೆ ಬಂದಿರುವ ಸಂತ್ರಸ್ತರಿಂದ ಸಾಲ ವಸೂಲಿಗೆ ಬ್ಯಾಂಕ್ ಮತ್ತು ಫೈನಾನ್ಸ್ ಕಂಪನಿಗಳು ಸಿವಿಲ್ ಮತ್ತು ಕ್ರಿಮಿನಲ್ ಕೇಸುಗಳನ್ನು ಹಾಕಿ ನೋಟಿಸು ಜಾರಿ ಮಾಡುತ್ತಿವೆ ಎಂದು ಅವರು ವಿಷಾಧ ವ್ಯಕ್ತಪಡಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group