ಜಿಲ್ಲಾ ಸುದ್ದಿ

ಕರ್ನಾಟಕ ವಿಧಾನಸಭೆ ಉಪಚುನಾವಣೆ: ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಎಸ್‍ಡಿಪಿಐ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ವರದಿಗಾರ (ನ 18): ರಾಜ್ಯದ ವಿಧಾನಸಭೆಗೆ ನಡೆಯುವ ಉಪಚುನಾವಣೆಗೆ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್‍ಡಿಪಿಐ ಅಭ್ಯರ್ಥಿ ದೇವನೂರು ಪುಟ್ಟನಂಜಯ್ಯ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯದ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧಿಸುತ್ತಿರುವ ಎಸ್‍ಡಿಪಿಐ ಪಕ್ಷವು ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯಾಗಿ ಅಬ್ದುಲ್ ಹನ್ನಾನ್ ರವರನ್ನು ಕಣಕ್ಕಿಳಿಸಿದ್ದು, ಅವರು ನಿನ್ನೆ ನಾಮಪತ್ರವನ್ನು ಸಲ್ಲಿಸಿದ್ದಾರೆ ಎಂದು ರಾಷ್ಟ್ರೀಯ ಸಮಿತಿ ಸದಸ್ಯ ಅಬ್ದುಲ್ ಲತೀಫ್ ಕೆ. ಪ್ರಕಟಣೆಯಲ್ಲಿ ಹೇಳಿದ್ದಾರೆ.

ನಾಮಪತ್ರ ಸಲ್ಲಿಸುವುದಕ್ಕಿಂತ ಮೊದಲು ಹುಣಸೂರಿನಲ್ಲಿರುವ ಶ್ರೀ. ಡಿ ದೇವರಾಜು ಅರಸು ಅವರ ಪ್ರತಿಮೆಗೆ ಗೌರವ ಸಲ್ಲಿಸಿ ಪಕ್ಷದ ಕಾರ್ಯಕರ್ತ ಹಾಗೂ ಸಾರ್ವಜನಿಕರೊಂದಿಗೆ ಜೊತೆಗೂಡಿದ ಬೃಹತ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಮಾತನಾಡಿದ ಅಭ್ಯರ್ಥಿ ದೇವನೂರು ಪುಟ್ಟನಂಜಯ್ಯ, ರಾಜ್ಯದ ಪ್ರಮುಖ ಮೂರು ಪಕ್ಷಗಳು ಈ ಉಪಚುನಾವಣೆಗೆ ಕಾರಣವಾಗಿದೆ. ಕುದುರೆ ವ್ಯಾಪಾರ ಮೂಲಕ ಶಾಸಕರು ರಾಜೀನಾಮೆ ಸಲ್ಲಿಸಿರುವುದರಿಂದ ಜನತೆಗೆ ಉಪಚುನಾವಣೆ ಅನಿವಾರ್ಯವಾಯಿತು. ಭೀಕರ ಮಳೆಯಿಂದ ಉಂಟಾದ ನೆರೆಯಿಂದ ತತ್ತರಿಸಿರುವ ರಾಜ್ಯದ ಬೊಕ್ಕಸಕ್ಕೆ ಚುನಾವಣಾ ಖರ್ಚು ಹೊರೆಯಾದವು. ಮೂರು ಪಕ್ಷಗಳಿಕೆ ತಕ್ಕ ಪಾಠ ಕಲಿಸಲು ಎಸ್‍ಡಿಪಿಐ ಸ್ಪರ್ಧಿಸಿದ ಎರಡೂ ಕ್ಷೇತ್ರಗಳನ್ನು ಚುನಾಯಿಸುವಂತೆ ವಿನಂತಿಸಿದರು.

ಈ ಸಂದರ್ಭ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಉಪಾಧ್ಯಕ್ಷರಾದ ನ್ಯಾಯವಾದಿ ಅಬ್ದುಲ್ ಮಜೀದ್ ಖಾನ್ ಕಾರ್ಯದರ್ಶಿಗಳಾದ ಕುಮಾರಸ್ವಾಮಿ, ಅಕ್ರಮ್ ಹಸನ್, ರಾಜ್ಯ ಸಮಿತಿ ಸದಸ್ಯರಾದ ಅಮ್ಜದ್ ಖಾನ್, ಅಬ್ರಾರ್ ಅಹ್ಮದ್, ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಯೂನುಸ್, ಗ್ರಾಮ ಪಂಚಾಯತ್ ಅಧ್ಯಕ್ಷ ಫೈರೋಝ್, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೋರೇಟರ್ ಎಸ್.ಸ್ವಾಮಿ, ಸ್ಥಳೀಯ ನಾಯಕರಾದ ಮಜಾಝ್, ಪ್ರಸನ್ನ ಚಕ್ರವರ್ತಿ, ಸತೀಶ್, ಸಮೀರ್, ಮಸೂದು, ಕೊಡಗು ಜಿಲ್ಲಾಧ್ಯಕ್ಷ ನ್ಯಾಯವಾದಿ ಅಬೂಬಕ್ಕರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group