ರಾಜ್ಯ ಸುದ್ದಿ

ಮಂಗಳೂರು ಗೋಲಿಬಾರ್; ರಾಜ್ಯ ಸರಕಾರ ಸಿಐಡಿ ತನಿಖೆಗೆ ಆದೇಶಿಸಿರುವಾಗ ಕಮಿಷನರ್ ವೀಡಿಯೋ ಕೇಳುತ್ತಿರುವುದು ಯಾಕೆ?: ದಿನೇಶ್ ಗುಂಡೂರಾವ್

ವರದಿಗಾರ (ಡಿ.25, 2019): ಮಂಗಳೂರು ಪೊಲೀಸರು ನಡೆಸಿರುವ ಗೋಲಿಬಾರ್ ಪ್ರಕರಣದಲ್ಲಿ ರಾಜ್ಯ ಸರಕಾರ ಸಿಐಡಿ ತನಿಖೆಗೆ ಆದೇಶಿಸಿದ್ರೂ ಕೂಡಾ ಜಿಲ್ಲಾ ಪೊಲೀಸ್ ಕಮಿಷನರ್ ಡಾ. ಹರ್ಷ ಅವರು ಜನರಿಂದ ವೀಡಿಯೋ ಕೇಳುತ್ತಿರುವುದು ಯಾಕೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಸಿಐಡಿಯನ್ನು ತನಿಖೆಗಾಗಿ ನೇಮಿಸಿರುವಾಗ ಅವರೊಂದಿಗೆ ತನಿಖೆಗೆ ಸಹಕರಿಸಬಹುದಲ್ಲವೇ, ಅದು ಬಿಟ್ಟು ಕಮಿಷನರ್ ಹರ್ಷ ಅವರು ಸಾಮಾಜಿಕ ತಾಣಗಳಲ್ಲಿ ವೀಡಿಯೋ ಯಾಕೆ ಬಿಡುಗಡೆ ಮಾಡಿದ್ದಾರೆ ಎಂದವರು ಪ್ರಶ್ನಿಸಿದ್ದಾರೆ.

ಗೋಲಿಬಾರ್ ನಡೆಸುವುದಕ್ಕಿಂತ ಮುಂಚಿತವಾಗಿ ಪ್ರತಿಭಟನೆಕಾರರು ಬಂದರು ಠಾಣೆಯ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ್ದರು ಎಂದು ಕಮಿಷನರ್ ಹೇಳಿದ್ದರೆ, ಯಡಿಯೂರಪ್ಪ ಅವರು, ಮಂಗಳೂರಿನ ಆಯುಧ ಶಾಲೆಯ ಮೇಲೆ ಪ್ರತಿಭಟನೆಕಾರರು ದಾಳಿ ಮಾಡಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಇವುಗಳಲ್ಲಿ ಯಾವುದು ಸತ್ಯ ಎಂದು ಸರಕಾರ ಸ್ಪಷ್ಟಪಡಿಸಬೇಕು ಎಂದ ಗುಂಡೂರಾವ್ ಹೇಳಿದ್ದಾರೆ.ಸರಕಾರ ಒಂದು ಹೇಳಿಕೆ ಮತ್ತು ಕಮಿಷನರ್ ಇನ್ನೊಂದು ಹೇಳಿಕೆ ನೀಡಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದವರು ಹೇಳಿದರು.

ಈ ಎಲ್ಲಾ ಘಟನೆಗಳ ಕುರಿತು ನೈಜತೆ ಹೊರಬರಬೇಕಾದರೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದವರು ಆಗ್ರಹಿಸಿದರು. ಅವರು ಇಂದು ಮಂಗಳೂರಿಗೆ ಆಗಮಿಸಿ ಪೊಲೀಸ್ ದೌರ್ಜನ್ಯಕ್ಕೊಳಗಾದ ಗಾಯಾಳುಗಳನ್ನು ಭೇಟಿ ಮಾಡಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group