
‘ಅಪರಾಧಿಗಳಿಗೆ ಪರಿಹಾರ ಕೊಡುವ ಪದ್ಧತಿ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ’: ಶೋಭಾ ಕರಂದ್ಲಾಜೆ
ವರದಿಗಾರ (ಡಿ.25, 2019): ಗೋಲಿಬಾರ್ನಲ್ಲಿ ಮೃತಪಟ್ಟವರು ಅಪರಾಧಿಗಳು ಎಂಬ ಶಂಕೆ ವ್ಯಕ್ತವಾಗಿರುವುದರಿಂದ ಅವರಿಗೆ ಪರಿಹಾರ ಕೊಡುವ ಬಗ್ಗೆ ತನಿಖೆಯ ನಂತರವೇ ರಾಜ್ಯ ಸರ್ಕಾರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಅವರು ಮಂಗಳೂರಿನ ಸರ್ಕೀಟ್ ಹೌಸ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ‘ಒಂದು ವೇಳೆ ಅಪರಾಧಿಗಳು ಎಂದು ಸಾಬೀತಾದರೆ ಪರಿಹಾರ ಕೊಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
ಈ ಹಿಂದೆ ಯಡಿಯೂರಪ್ಪ, ‘ಗೋಲಿಬಾರ್ನಲ್ಲಿ ಮೃತಪಟ್ಟವರಿಗೆ ರೂಪಾಯಿ10 ಲಕ್ಷ ಪರಿಹಾರ ವಿತರಿಸಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ’ ಎಂದು ಹೇಳಿದ್ದರು.
ಬಸವರಾಜ್ ಬೊಮ್ಮಾಯಿ ಮಾತನಾಡಿ, ‘ವಿವಿಧ ಸಮುದಾಯಗಳ ನಾಯಕರೊಂದಿಗೆ ಸಂಪರ್ಕದಲ್ಲಿರಿ. ಕಾನೂನು ಸುವ್ಯವಸ್ಥೆ ಕಾಪಾಡಲು ಗಮನ ಕೊಡಿ’ ಎಂದು ಪೊಲೀಸರಿಗೆ ಸೂಚಿಸಿದ್ದೇವೆ ಎಂದು ಹೇಳಿದ್ದಾರೆ. ‘ಮಂಗಳೂರಿನಲ್ಲಿ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಪರಿಸ್ಥಿತಿ ನಿರ್ವಹಿಸಲು ಏನು ಮಾಡಬೇಕಿತ್ತೋ ಅದನ್ನು ಮಾಡಿದ್ದಾರೆ. ಅವರಿಗೆ ನಮ್ಮ ಬೆಂಬಲ ಇದೆ. ಇನ್ಸ್ಪೆಕ್ಟರ್ ಅಮಾನತು ಮಾಡಬೇಕು ಎಂಬ ಒತ್ತಾಯಗಳು ಬಗ್ಗೆ ಈಗಲೇ ಏನೂ ಹೇಳಲು ಆಗದು. ತನಿಖೆ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದೂ ಹೇಳಿಕೊಂಡಿದ್ದಾರೆ.
‘ಅಪರಾಧಿಗಳಿಗೆ ಪರಿಹಾರ ಕೊಡುವ ಪದ್ಧತಿ ಪ್ರಪಂಚದಲ್ಲಿ ಎಲ್ಲಿಯೂ ಇಲ್ಲ’ ಎಂದು ಹೇಳಿರುವ ಸಂಸದೆ ಶೋಭಾ ಕರಂದ್ಲಾಜೆ ತನ್ನ ಎಂದಿನ ವಕ್ರ ಬುದ್ದಿ ತೋರಿಸಿಕೊಂಡಿದ್ದಾರೆ.
