ರಾಜ್ಯ ಸುದ್ದಿ

ಮಂಗಳೂರು ಪೊಲೀಸ್ ಗೋಲಿಬಾರ್: ಕರ್ನಾಟಕ ರಾಜ್ಯ ಸರಕಾರ ನೀಡಬೇಕಾಗಿದ್ದ ಪರಿಹಾರ; ನೀಡಿದ್ದು ಪಶ್ಚಿಮ ಬಂಗಾಳ ಸರಕಾರ

ಗೋಲಿಬಾರ್ ನಿಂದ ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ವಿತರಿಸಿದ ಟಿಎಂಸಿ

ವರದಿಗಾರ (ಡಿ.28,19): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಮುಂದಾದ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಪೊಲೀಸರ ಗೋಲಿಬಾರ್ ನಿಂದ ಮೃತಪಟ್ಟ ಇಬ್ಬರು ಯುವಕರ ಕುಟುಂಬಕ್ಕೆ ತೃಣಮೂಲ ಕಾಂಗ್ರೆಸ್‌ ತಲಾ ರೂಪಾಯಿ 5 ಲಕ್ಷ ಮೊತ್ತದ ಪರಿಹಾರವನ್ನು ನೀಡಿದ್ದು, ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

ಕರ್ನಾಟಕ ರಾಜ್ಯ ಸರಕಾರವು ಘೋಷಿಸಿದ್ದ ಪರಿಹಾರ ಮೊತ್ತವನ್ನು ಹಿಂಪಡೆದ ಸುದ್ದಿಗೆ ಹೊರ ರಾಜ್ಯದ ಹೃದಯ ಮಿಡಿದಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಅಮಾಯಕ ಯುವಕರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ ಎಂದು ಇತ್ತೀಚೆಗಷ್ಟೇ ಹೇಳಿಕೆ ನೀಡಿ ರಾಜ್ಯ ಸರಕಾರದ ಕ್ರಮಕ್ಕೆ ತೀಕ್ಷವಾಗಿ ಪ್ರತಿಕ್ರಿಯಿಸಿದ್ದರು ಮತ್ತು ಇದರಿಂದ ರಾಜ್ಯ ಸರಕಾರ ಮುಖಭಂಗಕ್ಕೆ ಒಳಗಾಗಿತ್ತು.

ಮಾಜಿ ರೈಲ್ವೆ ಸಚಿವ ದಿನೇಶ್‌ ತ್ರಿವೇದಿ ಮತ್ತು ರಾಜ್ಯಸಭಾ ಸದಸ್ಯ ಎಂ.ಡಿ.ನದೀಮ್ ಉಲ್‌ ಹಕ್‌ ನೇತೃತ್ವದ ನಿಯೋಗ ಶನಿವಾರ ಬೆಳಿಗ್ಗೆ ಮಂಗಳೂರಿಗೆ ಬಂದು ಗೋಲಿಬಾರ್‌ನಲ್ಲಿ ಮೃತಪಟ್ಟಿರುವ ಕಂದಕ್‌ ನಿವಾಸಿ ಅಬ್ದುಲ್‌ ಜಲೀಲ್‌ ಹಾಗೂ ಕುದ್ರೋಳಿ ನಿವಾಸಿ ನೌಶೀನ್‌ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿತು. ಬಳಿಕ ತಲಾ  5 ಲಕ್ಷ ಮೊತ್ತದ ಪರಿಹಾರದ ಚೆಕ್‌ ವಿತರಿಸಿದೆ. ಪಕ್ಷದ ಕಾರ್ಮಿಕ ಸಂಘಟನೆಯ ಮೂಲಕ ವಂತಿಗೆ ಸಂಗ್ರಹಿಸಿ ಈ ಪರಿಹಾರ ನೀಡಲಾಗಿದೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.

ಈ ಸಂದರ್ಭ ಮಾತನಾಡಿದ ತೃಣಮೂಲ ಕಾಂಗ್ರೆಸ್‌ ನಾಯಕರು, ‘ಗೋಲಿಬಾರ್‌ ನಡೆಸಿ ಇಬ್ಬರನ್ನು ಹತ್ಯೆಗೈದಿರುವುದು ಖಂಡನಾರ್ಹ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಎಲ್ಲಿಯೂ ಈ ರೀತಿ ಗುಂಡು ಹಾರಿಸಿಲ್ಲ. ಪೊಲೀಸರ ಈ ಕ್ರಮವನ್ನು ಒಪ್ಪಲು ಸಾಧ್ಯವೇ ಇಲ್ಲ’ ಎಂದು ಪೊಲೀಸರ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಸರಕಾರವು ಘೋಷಿಸಿದ್ದ ಪರಿಹಾರ ಮೊತ್ತವನ್ನು ಹಿಂಪಡೆದಿರುವುದಕ್ಕೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗಿದ್ದು, ಇದು ಬಿಜೆಪಿ ಸರಕಾರದ ದ್ವೇಷ ರಾಜಕೀಯವೆಂದು ಬಣ್ಣಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group