ರಾಷ್ಟ್ರೀಯ ಸುದ್ದಿ

ಬಿಜೆಪಿ ತನ್ನ ಕೋಮುವಾದಿ ನೀತಿಗಳಿಂದ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ: ಮಾಯಾವತಿ

‘ಭಾರತ ಜಾತ್ಯತೀತ ರಾಷ್ಟ್ರ; ಅಧಿಕಾರದಲ್ಲಿರುವವರು ಇದನ್ನು ಮರೆಯಬಾರದು’

‘2019ನೇ ವರ್ಷ ಅತ್ಯಂತ ನೋವು ತಂದ ವರ್ಷ’

ವರದಿಗಾರ (ಜ.01,20): ಬಿಜೆಪಿ ತನ್ನ ಕೋಮುವಾದಿ ನೀತಿಗಳಿಂದ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ಬುಧವಾರ ಹೊಸ ವರ್ಷದ ಪ್ರಯುಕ್ತ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ತನ್ನ ಕೋಮುವಾದಿ ನೀತಿಗಳಿಂದ ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುವ ಪ್ರತಿಭಟನಾಕಾರರು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಕಿವಿ ಮಾತು ಹೇಳಿದ್ದಾರೆ.

‘ಜವಾಬ್ದಾರಿಯುತ ಸ್ಥಾನದಲ್ಲಿರುವ ವ್ಯಕ್ತಿಗಳು ಭಾರತ ಜಾತ್ಯತೀತ ರಾಷ್ಟ್ರ, ಇಲ್ಲಿ ಎಲ್ಲಾ ಬಗೆಯ ಧರ್ಮದ, ಜಾತಿಯ ಪ್ರಜೆಗಳು ವಾಸ ಮಾಡುತ್ತಿದ್ದಾರೆ ಎನ್ನುವುದನ್ನು ಮರೆಯಬಾರದು’ ಎಂದು ಸರಕಾರಕ್ಕೆ ಸ್ಪಷ್ಟ ಮಾತಿನ ಮೂಲಕ ಸಲಹೆ ನೀಡಿದ್ದಾರೆ.

‘ಭಾರತ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿದೆ. ಇಲ್ಲಿ ವಿವಿಧ ಜಾತಿ, ಧರ್ಮದ ಜನರು ಅವರದ್ದೇ ಆದ ಜೀವನ ಶೈಲಿ, ಸಂಪ್ರದಾಯ ಹಾಗೂ ಸಂಸ್ಕೃತಿಗಳನ್ನು ಹೊಂದಿದ್ದಾರೆ. ಅವುಗಳನ್ನು ನಾವು ಗೌರವಿಸಬೇಕು’ ಎಂದು ತಾಕೀತು ಮಾಡಿದ್ದಾರೆ.

‘2019ನೇ ವರ್ಷ ಅತ್ಯಂತ ನೋವು ತಂದ ವರ್ಷ, ಕೇಂದ್ರ ಹಾಗೂ ರಾಜ್ಯಸರ್ಕಾರಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷದ ಸಂವಿಧಾನ ವಿರೋಧಿ, ಏಕ ಮುಖ ನೀತಿಯಿಂದಾಗಿ ಕೋಮುಗಲಭೆಯನ್ನು ಕಂಡಿರುವ ವರ್ಷ ಎಂದು ಬಣ್ಣಿಸಿದ್ದಾರೆ. ಪ್ರತಿಭಟನೆ ನಡೆಸುವಾಗ ಯಾವುದೇ ಧಾರ್ಮಿಕ ಭಾವನೆಗಳು ಹಾಗೂ ಶಾಂತ ಪರಿಸ್ಥಿತಿ ಕದಡದಂತೆ ಎಚ್ಚರಿಕೆ ವಹಿಸಬೇಕು. 2020ನೇ ವರ್ಷದಲ್ಲಿ ಇಂತಹ ಯಾವುದೇ ನೋವು ಕಷ್ಟಗಳು ಬಾರದಿರಲಿ’ ಎಂದು ಹೇಳಿದ್ದಾರೆ.

 

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group