ರಾಜ್ಯ ಸುದ್ದಿ

ಮೋದಿಯವರೇ, ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ?: ಸಿದ್ದರಾಮಯ್ಯ ಪ್ರಶ್ನೆ

‘ಕೇಂದ್ರ ಸರ್ಕಾರವನ್ನು ದಿವಾಳಿ ಮಾಡಿದಂತೆ ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ?’

‘ರಾಜ್ಯದ ಜನ ನೆರೆನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ನೀಡಲು ನೀವು ಬರಲಿಲ್ಲ. ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ?’

ಉತ್ತರ ಕೊಡಿ ಮೋದಿ ಎಂದು ಮಾಜಿ ಮುಖ್ಯಮಂತ್ರಿಗಳ ಪ್ರಶ್ನೆಗಳ ಸುರಿಮಳೆ

ವರದಿಗಾರ (ಜ.2,20):  ಪ್ರಧಾನಿ ಮೋದಿಯವರೇ, ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಖಾಸಗಿ ಕಾರ‍್ಯಕ್ರಮದಲ್ಲಿ ಭಾಗವಹಿಸ;ಲು ಇಂದು ಮಧ್ಯಾಹ್ನ ತುಮಕೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿದ್ದರಾಮಯ್ಯ ತನ್ನ ಟ್ವಿಟ್ಟರ್ ನಲ್ಲಿ ಸರಣಿ ಪ್ರಶ್ನೆಯನ್ನು ಕೇಳಿದ್ದು, ಉತ್ತರ ಕೊಡಿ ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಹಲವಾರು ಪ್ರಶ್ನೆಗಳನ್ನು ಕೇಳಿ ಉತ್ತರ ಕೊಡಿ ಎಂದಿದ್ದಾರೆ.

ಸಿದ್ದರಾಮಯ್ಯ ಮಾಡಿರುವ ಸರಣಿ ಪ್ರಶ್ನೆಗಳನ್ನು ಕೆಳಗೆ ನೀಡಲಾಗಿದೆ.

‘ಹೊಸ ವರ್ಷದ ‘ಅಚ್ಚೇ ದಿನ್’ ಇನ್ನಷ್ಟು ಭೀಕರವಾಗಲಿರುವ ಸೂಚನೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ. ಮೊದಲು ರೈಲ್ವೆ ಪ್ರಯಾಣ ದರ, ನಂತರ ಅಡುಗೆ ಅನಿಲದ‌ ಬೆಲೆ ಹೆಚ್ಚಿಸಲಾಗಿದೆ. ಇನ್ನೊಂದೆಡೆ ತೆರಿಗೆ ಸಂಗ್ರಹ ಕುಂಠಿತಗೊಳ್ಳುತ್ತಿದೆ. ಅಸಮರ್ಥರ ಕೈಗೆ ಅಧಿಕಾರ ಕೊಟ್ಟ ತಪ್ಪಿಗೆ ಜನ ಶಿಕ್ಷೆಗೊಳಗಾಗುತ್ತಿದ್ದಾರೆ’.

‘ಪ್ರಧಾನಿ ಮೋದಿ ಅವರೇ, ರಾಜ್ಯದ ಜನ ನೆರೆನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ನೀಡಲು ನೀವು ಬರಲಿಲ್ಲ, ತುಟಿ ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ? #ಉತ್ತರಕೊಡಿಮೋದಿ’

‘ ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿಕೊಡಲಿಲ್ಲ, ಕೇಂದ್ರ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ ಮೋದಿ ಅವರೇ? #ಉತ್ತರಕೊಡಿಮೋದಿ’

‘ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ,ಇಡಿ,ಸಿಬಿಐ ಛೂ ಬಿಡ್ತೀರಿ, ಗಣಿಕಳ್ಳರು,ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ‘’ಸ್ವಚ್ಚ ಭಾರತ್’’ ? #ಉತ್ತರಕೊಡಿಮೋದಿ’

‘ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ, ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ, ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ? #ಉತ್ತರಕೊಡಿಮೋದಿ’

‘ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ, ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವ ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? #ಉತ್ತರಕೊಡಿಮೋದಿ’

‘ನೆರೆಹಾವಳಿಯಿಂದ ಆಗಿರುವ ನಷ್ಟ ಅಂದಾಜು ರೂ.೫೦ ಸಾವಿರ ಕೋಟಿಗೂ ಅಧಿಕ. ರಾಜ್ಯ ಸರ್ಕಾರ ಕೇಳಿದ್ದು ರೂ.36 ಸಾವಿರ ಕೋಟಿ, ಕೇಂದ್ರ ಸರ್ಕಾರ ಕೊಟ್ಟಿದ್ದು ರೂ.1200 ಕೋಟಿ. ಕರ್ನಾಟಕದ ಬಗ್ಗೆ ಯಾಕೆ ತಾತ್ಸಾರ? #ಉತ್ತರಕೊಡಿಮೋದಿ’

‘ಜಿಎಸ್‌ಟಿ ಪರಿಹಾರ ತಿಂಗಳಿಗೆ ರೂ.3600 ಕೋಟಿ ಬರ್ಬೇಕು. ಕಳೆದ ಸೆಪ್ಟೆಂಬರ್‌ನಿಂದ ಪೈಸೆ ಹಣ ಬಂದಿಲ್ಲ. ಸುಮಾರು ರೂ.14-15 ಸಾವಿರ ಕೋಟಿ ಬಾಕಿ ಇದೆ. ಮೋದಿ ಅವರೇ ಕೇಂದ್ರಸರ್ಕಾರವನ್ನು ದಿವಾಳಿ ಮಾಡ್ತಿದ್ದೀರಿ, ನಮ್ಮ ರಾಜ್ಯವನ್ನೂ ದಿವಾಳಿ ಮಾಡಲು ಹೊರಟಿದ್ದೀರಾ? #ಉತ್ತರಕೊಡಿಮೋದಿ’.

ಮೇಲಿನ ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರ ಕೊಡುತ್ತಾರ ಎಂಬುವುದು ಮಾತ್ರ ಯಕ್ಷ ಪ್ರಶ್ನೆಯಾಗಿ ಉಳಿದಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

This poll has been finished and no longer available to vote !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group