ರಾಜ್ಯ ಸುದ್ದಿ

ವಿದ್ಯಾರ್ಥಿಗಳ ಮೇಲೆ ಗುಂಡಿಕ್ಕಿದ ಭಯೋತ್ಪಾದಕ; ಗಾಂಧೀಜಿಯ ಹತ್ಯೆಗೈದ ಸಂತತಿಗಳು: ಸಿದ್ದರಾಮಯ್ಯ

‘ಗೋಡ್ಸೆಯ ಸಂತತಿಯವರು ದೇಶದಲ್ಲಿ ಇಂದಿಗೂ ದೇಶ ಒಡೆಯುವ ಕೃತ್ಯ ಎಸಗುತ್ತಿದ್ದಾರೆ’

‘ಇದು ದೇಶದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ತರುವ ಬಿಜೆಪಿಯ ಹಿಡನ್ ಅಜೆಂಡಾದ ಭಾಗವಾಗಿದೆ’

‘ಕೇಂದ್ರ ಸರಕಾರ ದೇಶಾದ್ಯಂತ ದ್ವೇಷ ಬಿತ್ತುವ, ಸಮಾಜ ಒಡೆಯುವ ಕೆಲಸ ಮಾಡುತ್ತಿದೆ’

ವರದಿಗಾರ, ಜ.31: ದೆಹಲಿ ಜಾಮಿಯ ವಿವಿ ಆವರಣದಲ್ಲಿ ಸಿಎಎ ಕಾಯ್ದೆ ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಗೂಂಡಾನೋರ್ವ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದರಿಂದ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ.

‘ರಾಷ್ಟ್ರಪಿತ ಗಾಂಧೀಜಿಯವರನ್ನು ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದ ದಿನದಂದೇ ಈ ದಾಳಿ ನಡೆಸಿರುವುದು ದೇಶದಲ್ಲಿ ಹಿಟ್ಲರ್ ಆಡಳಿತ ಜಾರಿಗೆ ತರುವ ಬಿಜೆಪಿಯ ಹಿಡನ್ ಅಜೆಂಡಾದ ಭಾಗವಾಗಿದೆ. ಗಾಂಧೀಜಿ ಅವರನ್ನು ಕೊಂದ ಸಂತತಿಯವರೇ ಈ ದಾಳಿ ನಡೆಸಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಚಿಕ್ಕಮಗಳೂರು ಆಗಮಿಸಿದ್ದ ವೇಳೆ ನಗರ ಸಮೀಪದ ಕೈಮರದಲ್ಲಿರುವ ಸಿರಿ ಹೊಟೇಲ್ ಆವರಣದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡುತ್ತಿದ್ದರು.

‘ಮಹಾತ್ಮಾ ಗಾಂಧೀಜಿ ಹಿಂದೂ ವಿರೋಧಿಯಾಗಿರಲಿಲ್ಲ, ಸಂವಿಧಾನ ವಿರೋಧಿಯೂ ಆಗಿರಲಿಲ್ಲ. ಅವರು ದೇಶದ ಸೌಹಾರ್ದ, ಸಾಮರಸ್ಯ ಪರಂಪರೆಯ ಧ್ಯೋತಕವಾಗಿದ್ದರು. ಆದರೆ ಅವರನ್ನು 1948, ಜೂ.30ರಂದು ಅವರನ್ನು ಗೋಡ್ಸೆಯು ಹತ್ಯೆ ಮಾಡಿದ್ದ. ಅಂದಿನ ನಾಥೂರಾಮ್ ಗೋಡ್ಸೆಯ ಸಂತತಿಯವರು ದೇಶದಲ್ಲಿ ಇಂದಿಗೂ ದೇಶ ಒಡೆಯುವ ಕೃತ್ಯ ಎಸಗುತ್ತಿದ್ದಾರೆ. ಗಾಂಧೀಜಿ ಅವರನ್ನು ಹತ್ಯೆ ಮಾಡಿದ ದಿನದಂದೇ ಅವರದ್ದೇ ಸಂತತಿಯ ಮತಾಂಧನೊಬ್ಬ ಜಾಮಿಯ ವಿವಿ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ಘಟನೆ ದೇಶ ಎತ್ತ ಸಾಗುತ್ತಿದೆ ಎಂಬುದಕ್ಕೆ ಹಿಡಿದ ಕನ್ನಡಿಯಾಗಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಆರೆಸ್ಸೆಸ್‌ನ ಹಿಡನ್ ಅಜೆಂಡಾವನ್ನು ದೇಶದ ಮೇಲೆ ಹೇರಿಕೆ ಮಾಡಲು ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಈ ಸಂದರ್ಭ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸಂಘ ಪರಿವಾರದ ಸದಸ್ಯ ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಲು ಮುಂದಾದಾಗ ಪೊಲೀಸರು ಅದನ್ನು ನೋಡುತ್ತಾ ಕೈಕಟ್ಟಿಕೊಂಡು ಮೂಕ ಪ್ರೇಕ್ಷಕರಂತೆ ವರ್ತಿಸಿದ್ದಾರೆ. ದಿಲ್ಲಿ ಪೊಲೀಸರು ಅಮಿತ್ ಶಾರ ಅಣತಿಯಂತೆ ಕಾರ್ಯನಿರ್ವಹಿಸಿರುವುದಕ್ಕೆ ಇದು ಸಾಕ್ಷಿ’ ಎಂದು ಹೇಳಿದ್ದಾರೆ.

‘ಕೇಂದ್ರ ಸರಕಾರ ದೇಶಾದ್ಯಂತ ದ್ವೇಷ ಬಿತ್ತುವ, ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಕೇಂದ್ರ ಸರಕಾರದ ವಿರುದ್ಧ ಮಾತನಾಡುವವರಿಗೆ ದೇಶದಲ್ಲಿ ರಕ್ಷಣೆ ಇಲ್ಲ ಎಂಬುದನ್ನು ಅಮಿತ್ ಶಾ ಗುಂಡಿನ ದಾಳಿ ಮೂಲಕ ಉತ್ತರ ನೀಡಿದ್ದಾರೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಇತ್ತೀಚಿಗೆ ದಿಲ್ಲಿಯಲ್ಲಿ ಚುನಾವಣಾ ಪ್ರಚಾರದ ವೇಳೆ ‘ಗೋಲಿ ಮಾರೋ’ ಎಂದು ತಮ್ಮ ವಿರೋಧಿಗಳಿಗೆ ಗುಂಡಿಕ್ಕುವಂತೆ ಬಿಜೆಪಿ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. ಅಮಿತ್ ಶಾ, ನರೇಂದ್ರ ಮೋದಿ, ಅನುರಾಗ್ ಠಾಕೂರ್ ಅವರಂತಹ ಬಿಜೆಪಿ ನಾಯಕರ ಪ್ರಚೋದನೆಯಿಂದಲೇ ಈ ಗುಂಡಿನ ದಾಳಿದಿದೆ. ಇಂತಹ ಘಟನೆಗಳಿಂದಾಗಿ ದೇಶದ ಜನರು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ’.

 

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group