ರಾಷ್ಟ್ರೀಯ ಸುದ್ದಿ

ಮತಾಂತರ ಅವರವರ ವೈಯಕ್ತಿಕ ಆಯ್ಕೆ: ದೆಹಲಿ ಹೈಕೋರ್ಟ್

ವರದಿಗಾರ (ಮಾ.13): ಮತಾಂತರಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ತೀರ್ಪು ನೀಡಿದ್ದು, ಮತಾಂತರವು ಅವರವರ ವೈಯಕ್ತಿಕ ಆಯ್ಕೆ ಎಂದು ಹೇಳಿದೆ.

ಈ ಸಂಬಂಧ ಮತಾಂತರವನ್ನು ನಿಯಂತ್ರಿಸುವಂತೆ ಸರಕಾರಕ್ಕೆ ಆದೇಶ ನೀಡುವಂತೆ ಕೋರಿ ನ್ಯಾಯವಾದಿ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿ ಮೇಲಿನ ತೀರ್ಪನ್ನು ಪ್ರಕಟಿಸಿದೆ.

ಸರಕಾರಕ್ಕೆ ನೋಟಿಸ್ ಜಾರಿಗಳಿಗೊಳಿಸಲು ನಿರಾಕರಿಸಿರುವ ಮುಖ್ಯ ನ್ಯಾಯಾಧೀಶ ಡಿ.ಎನ್.ಪಟೇಲ್ ಹಾಗೂ ನ್ಯಾಯಾಧೀಶ ಹರಿಶಂಕರ್ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿದಾರರಿಗೆ ಅವರ ಅರ್ಜಿಯನ್ನು ಹಿಂತೆಗೆದುಕೊಳ್ಳುವ ಸ್ವಾತಂತ್ರ್ಯವನ್ನು ನೀಡಿತು.

ಯಾವುದೇ ಧರ್ಮವನ್ನು ಆಚರಿಸುವುದು ಆಯಾ ವ್ಯಕ್ತಿಯ ವೈಯಕ್ತಿಕ ಆಯ್ಕೆಯಾಗಿದೆ. ನೀವು ಈ ವಿಚಾರದಲ್ಲಿ ಬಾಧಿತ ವ್ಯಕ್ತಿ ಕೂಡಾ ಆಗಿರುವುದಿಲ್ಲ ಎಂದು ನ್ಯಾಯಾಲಯ ಅರ್ಜಿದಾರರ ಗಮನಸೆಳೆಯಿತು.

ಮತಾಂತರಗೊಳ್ಳುವುದಕ್ಕೆ ಮುನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಅನುಮತಿ ಪಡೆದುಕೊಳ್ಳಬೇಕಾಗಿಲ್ಲವೆಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group