ರಾಜ್ಯ ಸುದ್ದಿ

ಕೊರೋನಾ ವೈರಸ್​​ ಚಿಕಿತ್ಸೆಗಾಗಿ ಉಪಯೋಗವಾಗದೇ ಇರುವ ಸರ್ಕಾರಿ ಕಟ್ಟಡಗಳನ್ನು ಬಳಸಿ: ರಾಜ್ಯ ಸರಕಾರಕ್ಕೆ ಕುಮಾರಸ್ವಾಮಿ ಮನವಿ

ವರದಿಗಾರ (ಮಾ.15): ಉಪಯೋಗವಾಗದೇ ಇರುವ ಸರ್ಕಾರಿ ಕಟ್ಟಡಗಳನ್ನು ಕೊರೋನಾ ವೈರಸ್​​​​ ನ ಚಿಕಿತ್ಸೆಗಾಗಿ ಬಳಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್​​ ಮಾಡಿರುವ ಜೆಡಿಎಸ್​​ ವರಿಷ್ಠ ಕುಮಾರಸ್ವಾಮಿ ಕೊರೋನಾ ವೈರಸ್​​ನಿಂದ ಬಳಲುತ್ತಿರುವ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸೆ ನೀಡಲು ಖಾಲಿಯಿರುವ ಸರ್ಕಾರಿ ಕಟ್ಟಡಗಳನ್ನು ಬಳಕೆ ಮಾಡಿ. ಇದರ ಬದಲಿಗೆ ಇತರೆ ರೋಗಿಗಳೊಂದಿಗೆ ಕೊರೋನಾ ಸೋಂಕಿತರಿಗೂ ಚಿಕಿತ್ಸೆ ನೀಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

‘ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇತರ ರೋಗಿಗಳ ಜೊತೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು’ ಎಂದು ರಾಜ್ಯ ಸರಕಾರಕ್ಕೆ ಅವರು ಮನವಿ ಮಾಡಿಕೊಂಡಿದ್ದಾರೆ.

‘ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ Quarantine ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ Quarantine ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು’ ಎಂದು ಹೇಳಿದ್ದಾರೆ.

‘ಕೊರೋನಾ ವೈರಸ್​​ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ’ ಎಂದು ಸರಕಾರಕ್ಕೆ ಸಲಹೆ ನೀಡಿದ್ದಾರೆ.

‘ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ’ ಎಂದೂ ಅವರು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group