ರಾಷ್ಟ್ರೀಯ ಸುದ್ದಿ

ತಬ್ಲೀಗ್ ಜಮಾಅತ್ ಮುಖ್ಯಸ್ಥನನ್ನು ‘ಭಯೋತ್ಪಾದಕ’ನೆಂದ ವೈದ್ಯನ ವಿರುದ್ಧ ಪ್ರಕರಣ ದಾಖಲು!

ವರದಿಗಾರ(ಎ.10): ತಬ್ಲೀಗ್ ಜಮಾಅತ್ ಮುಖ್ಯಸ್ಥ ಮೌಲಾನಾ ಸಾದ್ ರನ್ನು ‘ಭಯೋತ್ಪಾದಕ’ನೆಂದ ವೈದ್ಯನ ವಿರುದ್ಧ ಔರಂಗಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಹಾರಾಷ್ಟ್ರದ ಔರಂಗಾಬಾದ್ ನಗರದ ಸಿಡ್ಕೊ ಪ್ರದೇಶದ ಕಾಮ್ಗಾರ್ ಚೌಕ್‌ನಲ್ಲಿ ಕಾಸ್ಮೊ ಆಸ್ಪತ್ರೆ ನಡೆಸುತ್ತಿರುವ ಸಂಭಾಜಿ ಗೋವಿಂದ್ ಚಿತಾಲೆ (38) ಎಂಬ ವೈದ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿ ತನ್ನ ದ್ವೇಷದ ತೀಟೆ ತೀರಿಸಿಕೊಳ್ಳುವ ಪ್ರಯತ್ನ ಮಾಡಿದ್ದನು.

ಕೊರೋನಾ ವೈರಸ್ ಹರಡುವುದನ್ನು ತಪ್ಪಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮೌಲಾನಾ ಸಾದ್ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆ, 1897 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ ಮಧ್ಯದಲ್ಲಿ ದೆಹಲಿಯ ನಿಜಾಮುದ್ದೀನ್‌ನಲ್ಲಿ ತಬ್ಲೀಘಿ ಜಮಾತ್ ಆಯೋಜಿಸಿದ್ದ ಧಾರ್ಮಿಕ ಕೂಟದಲ್ಲಿ ಭಾಗವಹಿಸಿದ ನೂರಾರು ಜನರು ಕೊರೋನ ಪಾಸಿಟಿವ್ ಆಗಿದ್ದಾರೆ.

ಔರಂಗಾಬಾದ್ ಸಿಟಿ ಪೊಲೀಸರ ಪ್ರಕಾರ, “ವಾಂಟೆಡ್, ಈ ಭಯೋತ್ಪಾದಕನ ಸ್ಥಳದ ಬಗ್ಗೆ ನಿಮಗೆ ಏನಾದರೂ ಮಾಹಿತಿ ಇದ್ದರೆ ದಯವಿಟ್ಟು ನಿಮ್ಮ ಸ್ಥಳೀಯ ಪೊಲೀಸರಿಗೆ ತಿಳಿಸಿ” ಎಂಬ ಕಾಮೆಂಟ್ ಜೊತೆಗೆ ಚಿತಾಲೆ, ಮೌಲಾನಾ ಸಾದ್ ಅವರ ಛಾಯಾಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಪತ್ರಿಕಾ ಪ್ರಕಟಣೆಯ ಪ್ರಕಾರ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪ್ರಭಾಕರ್ ಸೋನಾವಣೆ ಅವರು ಈ ಪ್ರಕರಣದಲ್ಲಿ ಚಿತಾಲೆ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (ಬಿ) (ಸಿ) ಅಡಿಯಲ್ಲಿ ಅಪರಾಧ ದಾಖಲಿಸಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ ಪೊಲೀಸರು ವೈದ್ಯರ ವಿರುದ್ಧ ಅಪರಾಧ ದಾಖಲಿಸಿದ್ದಾರೆ. ಅವರನ್ನು ಬಂಧಿಸಿ ಕಾನೂನಿನ ಪ್ರಕಾರ ನೋಟಿಸ್ ನೀಡಲಾಗಿದೆ ”ಎಂದು ಪುಂಡಾಲಿಕ್‌ನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಜಿ ಬಿ ಸೋನಾವಣೆ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸರು ಎಚ್ಚರಿಸಿದ್ದಾರೆ.

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group