ರಾಜ್ಯ ಸುದ್ದಿ

ಲಾಕ್ ಡೌನ್ ಮುಂದುವರಿಸುವುದು ಅನಿವಾರ್ಯ: ಸಿಎಂ ಯಡಿಯೂರಪ್ಪ ಹೇಳಿಕೆ

‘ಈ ಲಾಕ್​ಡೌನ್ ಅವಧಿಯು ಮತ್ತಷ್ಟು ಕಠಿಣವಾಗಿರಲಿದೆ’

ವರದಿಗಾರ (ಎ.11): ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರಕಾರಕ್ಕೆ ಮತ್ತು ಜನತೆಗೆ ತಲೆ ನೋವಾಗಿ ಪರಿಣಮಿಸಿದೆ. ದೇಶದಲ್ಲಿ ಸದ್ಯದ ವರದಿ ಪ್ರಕಾರ 7876 ಸೋಂಕಿತರ ಬಗ್ಗೆ ಧೃಡಪಟ್ಟಿದ್ದು, 250 ಜನರು ಮೃತಪಟ್ಟಿರುವುದಾಗಿ ಮೂಲ ವರದಿಗಳು ತಿಳಿಸುತ್ತಿವೆ. ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆಯಾಗಿದ್ದು, 6 ಜನರು ಮೃತಪಟ್ಟಿದ್ದಾರೆ.

ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಲಾಕ್ ಡೌನ್ ಮುಂದುವರಿಸುವುದು ಅನಿವಾರ್ಯವೆಂದು ಹೇಳಲಾಗುತ್ತಿದೆ. ಒಂದು ವೇಳೆ ಲಾಕ್ ಡೌನ್ ಕಡಿತಗೊಳಿಸಿದ್ದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುವ ಎಲ್ಲಾ ಸಾಧ್ಯತೆಯಿದೆ.

ಕರ್ನಾಟಕ ರಾಜ್ಯದ ಮುಂದಿನ ನಡೆಯ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಪ್ರತಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು,  ‘ರಾಜ್ಯದಲ್ಲಿ ಎ.30ರವರೆಗೂ ಲಾಕ್​ಡೌನ್ ಅನಿವಾರ್ಯವಾಗಲಿದೆ’ ಎಂದು ಹೇಳಿದ್ದಾರೆ. ಎಪ್ರಿಲ್ 30ರವರೆಗೂ ಲಾಕ್​ಡೌನ್ ಅನಿವಾರ್ಯ. ಆದರೆ ಈ ಲಾಕ್​ಡೌನ್ ಅವಧಿಯು ಮತ್ತಷ್ಟು ಕಠಿಣವಾಗಿರಲಿದೆ’ ಎಂದು ಹೇಳಿದ್ದಾರೆ.

ಈ ಸಂದರ್ಭ ಅವರು, ಪ್ರಧಾನಿ ಜೊತೆಗಿನ ಸಭೆಯ ಮಾಹಿತಿಗಳನ್ನು ನೀಡಿದರು. ಲಾಕ್​ಡೌನ್ ವೇಳೆ ಸರಕಾರಿ ಕಚೇರಿಗಳು ಭಾಗಶಃ ತೆರೆಯಲು ಅನುಮತಿ ನೀಡಲಾಗುತ್ತದೆ. ಇನ್ನೆರಡು ದಿನಗಳಲ್ಲಿ ಮುಂದಿನ 15 ದಿನಗಳ ಲಾಕ್ ಡೌನ್ ಬಗ್ಗೆ ಮಾರ್ಗಸೂಚಿ ಹೊರಡಿಸುತ್ತೇವೆ. ಈ ವೇಳೆ ಲಾಕ್​ಡೌನ್ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ ಎಂದು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group