ರಾಷ್ಟ್ರೀಯ ಸುದ್ದಿ

ಉಗ್ರರರೊಂದಿಗೆ ನಂಟು ಹೊಂದಿದ್ದ ಮಾಜಿ ಪೊಲೀಸ್ ಅಧಿಕಾರಿಗೆ ನ್ಯಾಯಾಂಗ ಬಂಧನ

ವರದಿಗಾರ (ಎ.12): ಈ ವರ್ಷದ ಆರಂಭದಲ್ಲಿ ಶ್ರೀನಗರ-ಜಮ್ಮು ಹೆದ್ದಾರಿಯ ವಾಹನವೊಂದರಲ್ಲಿ ಇಬ್ಬರು ಉಗ್ರರನ್ನು ಕರೆದೊಯ್ಯುತ್ತಿದ್ದ ಸಂದರ್ಭ ಬಂಧಿಸಲ್ಪಟ್ಟಿದ್ದ ಜಮ್ಮು ಮತ್ತು ಕಾಶ್ಮೀರದ ಮಾಜಿ ಪೊಲೀಸ್ ಅಧಿಕಾರಿ ದವೀಂದರ್ ಸಿಂಗ್‌ಗೆ ಒಂದು ತಿಂಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ದವೀಂದರ್ ಸಿಂಗ್‌ರ ಪೊಲೀಸ್ ಕಸ್ಟಡಿ ಅವಧಿ ಎಪ್ರಿಲ್ 10ರಂದು ಕೊನೆಗೊಂಡಿದ್ದು ಆತನನ್ನು ದಿಲ್ಲಿಯ ನ್ಯಾಯಾಲಯದೆದುರು ಹಾಜರುಪಡಿಸಿದಾಗ ಮೇ 6ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಜೈನ್ ಆದೇಶ ನೀಡಿದ್ದಾರೆ. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಮೂವರು ಸಹ ಆರೋಪಿಗಳಾದ ಜಾವೇದ್ ಇಕ್ಬಾಲ್, ನವೀದ್ ಮುಷ್ತಾಕ್ ಮತ್ತು ಇಮ್ರಾನ್ ಶಫಿಯನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜನವರಿಯಲ್ಲಿ ದವೀಂದರ್ ಸಿಂಗ್‌ನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಇಲಾಖೆಯಿಂದ ಅಮಾನತು ಮಾಡಲಾಗಿದ್ದು ಜಮ್ಮು ಕಾಶ್ಮೀರದ ಜೈಲಿನಲ್ಲಿದ್ದ ಸಿಂಗ್‌ನನ್ನು ದಿಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲ ವರದಿ ತಿಳಿಸಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group