ರಾಜ್ಯ ಸುದ್ದಿ

ಸಮುದಾಯವನ್ನು ಗುರಿಯಾಗಿಸಿ ಕೋಮು ದ್ವೇಷ ಹರಡಿದರೆ ಕಠಿಣ ಕ್ರಮ: ಭಾಸ್ಕರ್ ರಾವ್  

ವರದಿಗಾರ (ಎ.12): ಜನರಲ್ಲಿ ಇದೀಗ ಕೊರೋನಾ ವೈರಸ್ ಗಿಂತ ಹೆಚ್ಚಿನ ಭೀತಿಯು ದ್ವೇಷವನ್ನು ಹರಡುತ್ತಿರುವುದರ ಮೇಲೆಯಾಗಿದೆ. ಬೇಕಾಬಿಟ್ಟಿ ದ್ವೇಷವನ್ನು ಹರಡಿ ಸಮಾಜದ ಸ್ವಾಸ್ಥ್ಯವನ್ನು ಕೆಡಿಸಲು ಕೆಲವೊಂದು ಕ್ರಿಮಿಗಳು ಹೊಂಚು ಹಾಕಿ ಕೂತಿದೆ. ಮನೆಯಲ್ಲಿದ್ದು ಸುಳ್ಳು ಸುದ್ದಿ ಮತ್ತು ದ್ವೇಷವನ್ನು ಹರಡುತ್ತಿರುವಂತಹ ಸುದ್ದಿಗಳು ವ್ಯಾಪಕವಾಗುತ್ತಿದೆ. ಅದರಲ್ಲೂ ಒಂದು ಸಮುದಾಯವನ್ನು ಗುರಿಯಾಗಿಸಿ ದ್ವೇಷ ಹರಡಲಾಗುತ್ತಿದೆ. ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆಯನ್ನು ನೀಡಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಈ ಸಂಬಂಧ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸರಕಾರ ವೈಜ್ಞಾನಿಕವಾಗಿ ಇಂತಹ ವದಂತಿಗಳ ಮೇಲೆ ತೀವ್ರ ನಿಗಾ ಇಡುತ್ತಿದೆ.ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಕೋಮು ದ್ವೇಷ ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿ ಹರಡಬೇಡಿ. ಇದು ನನ್ನ ಕಳಕಳಿಯ ಮನವಿ ಎಂದು ಅವರು ಸಾರ್ವಜನಿಕರಿಗೆ ಹೇಳಿದ್ದಾರೆ.

ಇತ್ತೀಚೆಗೆ ಕೆಲವರು ಐಷಾರಾಮಿ ಕಾರುಗಳಲ್ಲಿ ಓಡಾಡುತ್ತಿದ್ದುದನ್ನು ಪೊಲೀಸರು ಗಮನಿಸಿದ್ದಾರೆ. ಲಾಕ್‍ಡೌನ್ ಉಲ್ಲಂಘಿಸುವವರು ಯಾರೇ ಆದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ ಅವರು, ಲಾಕ್‍ಡೌನ್ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸಬೇಕಾಗಿದೆ ಎಂದು ಹೇಳಿದ್ದಾರೆ.

ಅತಿಥಿ ಗೃಹಗಳಲ್ಲಿ ವಾಸಿಸುವ ನಿವಾಸಿಗಳಿಂದ ಬಾಡಿಗೆಗೆ ಮಾಲಕರು ಒತ್ತಡ ಹೇರಬಾರದು. ಅಷ್ಟೇ ಅಲ್ಲದೆ, ಆಹಾರ ವಿತರಣೆ ಸಂಬಂಧ ದೂರುಗಳು ಕೇಳಿಬಂದರೆ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭಾಸ್ಕರ್ ರಾವ್ ಎಚ್ಚರಿಕೆ ನೀಡಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group