ರಾಷ್ಟ್ರೀಯ ಸುದ್ದಿ

ಮತ್ತೊಬ್ಬ ಸ್ವಯಂಘೋಷಿತ ದೇವ ಮಾನವನ ಅತ್ಯಾಚಾರ ಪ್ರಕರಣ: ಗುಜರಾತ್ ಸರಕಾರದ ನಿಧಾನಗತಿ ವಿಚಾರಣೆಯ ಬಗ್ಗೆ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ವರದಿಗಾರ-ದೆಹಲಿ:ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್ ಜೈಲು ಸೇರಿರುವ ಘಟನೆಯು ಸುದ್ದಿಯಾಗುತ್ತಿರುವಗಾಲೇ ಮತ್ತೊಬ್ಬ ದೇವಮಾನವ ಅಸಾರಾಂ ಬಾಪು ತನ್ನ ಆಶ್ರಮದಲ್ಲಿ 16 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿರುವುದರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ನಿಧಾನಗತಿಯಲ್ಲಿ ವಿಚಾರಣೆ ನಡೆಸುತ್ತಿರುವ ಗುಜರಾತ್‌ ಸರಕಾರವನ್ನು ಸುಪ್ರೀಂ ಕೋರ್ಟ್‌ ಸೋಮವಾರ ಪ್ರಶ್ನಿಸಿದೆ.

ನಿಧಾನಗತಿಯಲ್ಲಿ ವಿಚಾರಣೆ ನಡೆಸಲು ಕಾರಣ ಮತ್ತು ಅತ್ಯಾಚಾರ ಪ್ರಕರಣದ ಸಂಸ್ರತ್ತೆಯನ್ನು ಇದುವರೆಗೂ ವಿಚಾರಣೆಗೆ ಒಳಪಡಿಸದ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದ್ದಲ್ಲದೇ, ಇದರ ಕಾರಣವನ್ನು ನೀಡುವಂತೆ ಗುಜರಾತ್ ಸರಕಾರಕ್ಕೆ ಸೂಚಿಸಿದೆ.

1997–2006ರ ಮದ್ಯೆ ಅಹಮದಾಬಾದ್‌ ಹೊರ ವಲಯದ ಆಶ್ರಮದಲ್ಲಿ ವಾಸ್ತವ್ಯವಿದ್ದಾಗ ಸ್ವಯಂಘೋಷಿತ ದೇವಮಾನವ ಅಸಾರಾಂ ಅತ್ಯಾಚಾರ ನಡೆಸಿರುವುದಾಗಿ ಸೂರತ್‌ ಮೂಲದ ಮಹಿಳೆ ಪ್ರಕರಣವನ್ನು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ 2013ರಲ್ಲಿ ಅಸರಾಂ ಬಾಪು ಜೋಧಪುರ ಪೊಲೀಸರಿಂದ ಬಂಧನಕ್ಕೊಳಗಾದರು.

2016 ಜನವರಿ 11ರಂದು ಈ ಪ್ರಕರಣದ ಪ್ರಮುಖ ಸಾಕ್ಷಿ ಎನ್ನಲಾದ ಅಖಿಲ್ ಗುಪ್ತಾನನ್ನು ಹತ್ಯೆಗೈಯ್ಯಲಾಗಿತ್ತು, ಮತ್ತು ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗಿತ್ತು ಎಂದು ಹೇಳಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group