ರಾಷ್ಟ್ರೀಯ ಸುದ್ದಿ

ಪಾಕಿಸ್ತಾನ ವಿಮಾನ ದುರಂತ: ತೀವ್ರವಾಗಿ ದುಃಖಿತನಾಗಿದ್ದೇನೆ; ಬೇಸರ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ವರದಿಗಾರ (ಮೇ.22): ಪಾಕಿಸ್ತಾನದ ಕರಾಚಿ ಬಳಿ ನಡೆದ ವಿಮಾನ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಮಾನ ದುರಂತಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ, ”ಪಾಕಿಸ್ತಾನದ ವಿಮಾನ ಅಪಘಾತದಿಂದಾಗಿ ಸಂಭವಿಸಿರುವ ಪ್ರಾಣಹಾನಿಯಿಂದ ತೀವ್ರವಾಗಿ ದುಃಖಿತವಾಗಿದೆ. ಮೃತರ ಕುಟುಂಬಗಳಿಗೆ ನಮ್ಮ ಸಂತಾಪ ಮತ್ತು ಗಾಯಗೊಂಡವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ” ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನದ PIAನ PK-8303 ಅಪಘಾತಗೀಡಾಗಿರುವ ವಿಮಾನವಾಗಿದೆ. ದುರಂತಕ್ಕೀಡಾದ ವಿಮಾನದಲ್ಲಿ 91 ಪ್ರಯಾಣಿಕರು ಮತ್ತು 8 ಸಿಬ್ಬಂದಿಗಳಿದ್ದರು. ಪಾಕಿಸ್ತಾನದ ಲಾಹೋರ್‌ನಿಂದ ಕರಾಚಿಗೆ ವಿಮಾನ ಹಾರಾಡಿತ್ತು. ಆದರೆ, ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ದುರಂತ ಸಂಭವಿಸಿದೆ.

To Top
error: Content is protected !!
WhatsApp Join our WhatsApp group