ರಾಷ್ಟ್ರೀಯ ಸುದ್ದಿ

ತಮಿಳುನಾಡು: ಪೊಲೀಸ್ ಕಸ್ಟಡಿಯ ದೌರ್ಜನ್ಯದಿಂದ ತಂದೆ-ಮಗನ ಸಾವು ಪ್ರಕರಣ; ಸಿಬಿಐಗೆ ನೀಡಿದ ಮುಖ್ಯಮಂತ್ರಿ  

ಪೊಲೀಸರ ಅಮಾನವೀಯ ಕೃತ್ಯಕ್ಕೆ ವ್ಯಾಪಕ ಆಕ್ರೋಶ!

ವರದಿಗಾರ (ಜೂ.29): ತಮಿಳುನಾಡಿನ ತೂತುಕುಡಿಯಲ್ಲಿ ಪೊಲೀಸ್ ಕಸ್ಟಡಿ ಸಂದರ್ಭ ಪೊಲೀಸರಿಂದ ನಡೆದ ಅಮಾನವೀಯ ದೌರ್ಜನ್ಯದಿಂದ ತಂದೆ-ಮಗ ಸಾವನ್ನಪ್ಪಿರುವ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗುವುದು ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ.

ಕೋವಿಡ್-19 ಲಾಕ್ ಡೌನ್ ಸಂದರ್ಭ ಕೇವಲ 15 ನಿಮಿಷ ಹೆಚ್ಚು ಅಂಗಡಿ ತೆರೆದ ಕಾರಣಕ್ಕಾಗಿ ಅಂಗಡಿ ಮಾಲಕರಾದ ಜಯರಾಜ್ ಮತ್ತು ಅವರ ಮಗ ಬೆನಿಕ್ಸ್ ಎಂಬವರನ್ನು ಬಂಧಿಸಿ, ಪೊಲೀಸ್ ಕಸ್ಟಡಿಯಲ್ಲಿ ಅಮಾನವೀಯವಾಗಿ, ಕ್ರೂರವಾಗಿ ಪೊಲೀಸರು ಹಲ್ಲೆ ನಡೆಸಿ ತೀವ್ರ ಸ್ವರೂಪದ ರಕ್ತ ಹೋದರೂ ಸರಿಯಾದ ಚಿಕಿತ್ಸೆ ನೀಡದಿರುವುದರಿಂದ, ಸಮಯಕ್ಕೆ ಆಸ್ಪತ್ರೆಗೆ ದಾಖಲಿಸದಿರುವುದರಿಂದ ತಂದೆ ಮತ್ತು ಮಗ ಇಬ್ಬರೂ ತಮ್ಮ ಪ್ರಾಣವನ್ನು ಕಳೆದುಕೊಂಡಿರುವ ಭೀಕರ ಘಟನೆಯು ಸದ್ಯ ವ್ಯಾಪಕ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ವಿವಿಧ ಸಾಮಾಜಿಕ ತಾಣಗಳಲ್ಲಿ ಅಮಾನವೀಯವಾಗಿ ನಡೆದುಕೊಂಡು ತಂದೆ ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ಧ ಅಭಿಯಾನ ನಡೆಯುತ್ತಿದೆ. ಸದ್ಯ ಅಭಿಯಾನದಿಂದ ಎಚ್ಚೆತ್ತುಕೊಂಡ ತಮಿಳುನಾಡು ಸರಕಾರ ಘಟನೆಯನ್ನು ಸಿಬಿಐ ತನಿಖೆಗೆ ಹಸ್ತಾಂತರಿಸುವ ಬಗ್ಗೆ ಹೇಳಿಕೆ ನೀಡಿದೆ.

“ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವುದಾಗಿ ಸರಕಾರ ನಿರ್ಧರಿಸಿದೆ. ಮದ್ರಾಸ್ ಹೈಕೋರ್ಟ್ ಅನುಮತಿಯೊಂದಿಗೆ ಈ ಪ್ರಕರಣ ಸಿಬಿಐಗೆ ಹಸ್ತಾಂತರಗೊಳ್ಳಲಿದೆ”ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.

ಜನರ ರಕ್ಷಕರಾಗಬೇಕಿದ್ದ ಪೊಲೀಸರು, ತಮ್ಮ ಕಠೋರ ಮನಸ್ಸಿನಿಂದ ಅಮಾನವೀಯವಾಗಿ ಹಲ್ಲೆ ನಡೆಸಿ ತಂದೆ ಮತ್ತು ಮಗನ ಸಾವಿಗೆ ಕಾರಣರಾಗಿರುವುದು ವಿಪರ್ಯಾಸವೇ ಸರಿ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group