ರಾಷ್ಟ್ರೀಯ ಸುದ್ದಿ

ಭಾರತದಲ್ಲಿ TikTok ಸೇರಿದಂತೆ ಇತರ 59 ಚೈನಾ ಅಪ್ಲಿಕೇಶನ್ ಗಳಿಗೆ  ನಿಷೇಧ!

ವರದಿಗಾರ (ಜೂ.29): ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ವೇಗದಲ್ಲಿ ಚಲಿಸುತ್ತಿದ್ದ, ಹಲವರ ಪ್ರತಿಭೆಗಳಿಗೆ ಪ್ರಿಯವಾಗಿದ್ದ ಟಿಕ್ ಟಾಕ್ ಮತ್ತು ಇತರೆ 59 ಚೈನಾ ಅಪ್ಲಿಕೇಶನ್ ಗಳನ್ನು ಭಾರತ ಸರಕಾರ ನಿಷೇಧಿಸಲು ನಿರ್ಧರಿಸಿದೆ.  ರಾಷ್ಟ್ರೀಯ ಸುರಕ್ಷತೆಯ ಕಾರಣದಿಂದ ಸರಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಈ ಬಗ್ಗೆ ಚೈನಾ ಅಪ್ಲಿಕೇಶನ್ ಗಳನ್ನು ಬ್ಲಾಕ್ ಮಾಡುವಂತೆ ಫೋನ್ ಕಂಪೆನಿಗಳಿಗೆ ಸರಕಾರ ಆದೇಶವನ್ನು ನೀಡಿದೆ ಎಂದು ಮೂಲಗಳು ವರದಿ ಮಾಡಿವೆ.

ಲಡಾಖ್ ಗಡಿಯಲ್ಲಿ ಚೀನಾದೊಂದಿಗೆ ಗಡಿ ಬಿಕ್ಕಟ್ಟಿಗೆ ಹಲವು ವಾರಗಳ ಮೊದಲೇ ಚೈನಾ ಅಪ್ಲಿಕೇಶನ್ ಗಳನ್ನು ನಿಷೇಧಿಸುವ ಕುರಿತು ಚರ್ಚೆಗಳು ಆರಂಭವಾಗಿದ್ದವು. ಜೂ.15ರಂದು ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಉಭಯ ದೇಶಗಳ ಸೈನಿಕರ ನಡುವಿನ ಹಿಂಸಾತ್ಮಕ ಘರ್ಷಣೆಗಳ ಬಳಿಕ ಈ ಚರ್ಚೆಗಳು ವೇಗ ಪಡೆದುಕೊಂಡಿದ್ದು, ಟಿಕ್‌ಟಾಕ್, ಯುಸಿ ಬ್ರೌಸರ್, ಶೇರ್‌ಇಟ್ ಸೇರಿದಂತೆ ಚೀನಾದ 59 ಅಪ್ಲಿಕೇಶನ್ ಗಳನ್ನು ನಿಷೇಧಿಸುವ ಮಹತ್ವದ ನಿರ್ಧಾರವನ್ನು ಸರಕಾರವು ತೆಗೆದುಕೊಂಡಿದೆ.

ಮೂಲಗಳ ಮಾಹಿತಿ ಪ್ರಕಾರ ಚೀನಾ ಅಪ್ಲಿಕೇಶನ್ ಗಳು ಭಾರತದ ಸಾರ್ವಭೌಮತೆ ಮತ್ತು ಅಖಂಡತೆಗೆ, ಭಾರತದ ಭದ್ರತೆಗೆ, ಸರಕಾರದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಹಾನಿಯನ್ನುಂಟು ಮಾಡುವ ಚಟುವಟಿಕೆಗಳಲ್ಲಿ ತೊಡಗಿದ್ದವು, ಹೀಗಾಗಿ ಈ 59 ಅಪ್ಲಿಕೇಶನ್ ಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಸರಕಾರ ನಿಷೇಧಿಸಿರುವ 59 ಅಪ್ಲಿಕೇಶನ್ ಗಳ ಹೆಸರಿನ ವಿವರ ಈ ಕೆಳಗಿನಂತಿದೆ:

TikTok, Shareit, UC Browser, Kwai, Baidu map, Shein, Clash of Kings, DU battery saver, Helo, Likee, YouCam makeup, Mi Community, CM Browers, Virus Cleaner, APUS Browser, ROMWE, Club Factory, Newsdog, Beutry Plus, WeChat, UC News, QQ Mail, Weibo, Xender, QQ Music, QQ Newsfeed, Bigo Live, SelfieCity, Mail Master, Parallel Space, Mi Video Call Xiaomi, WeSync, ES File Explorer, Viva Video QU Video Inc, Meitu, Vigo Video, New Video Status, DU, Recorder, Vault- Hide, Cache Cleaner DU App studio, DU Cleaner, DU Browser, Hago Play, With New Friends, Cam Scanner, Clean Master Cheetah Mobile, Wonder Camera, Photo, Wonder, QQ Player, We Meet, Sweet Selfie, Baidu Translate, Vmate, QQ International, QQ, Security Center, QQ Launcher, U Video, V fly Status Video, Mobile Legends, DU Privacy

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group