ವರದಿಗಾರ-ಜೈಪುರ: ಹಂದಿ ಜ್ವರ ಎಂಬ ಮಾರಕ ರೋಗಕ್ಕೆ ತುತ್ತಾಗಿ ರಾಜಸ್ಥಾನದ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ಮಂಡಲ್ ಘರ್ ವಿಧಾನಸಭಾ ಕ್ಷೇತ್ರ ಶಾಸಕಿ ಕೀರ್ತಿ ಕುಮಾರಿ ಮೃತಪಟ್ಟಿದ್ದಾರೆ.
ಹಂದಿ ಜ್ವರದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯರಾತ್ರಿ ಉಸಿರಾಟ ಸಮಸ್ಯೆಯಿಂದಾಗಿ ಮತ್ತಷ್ಟು ಅನಾರೋಗ್ಯಕ್ಕೀಡಾದರು. ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.
2013ರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಮತಗಳಿಂದ ಚುನಾಯಿತರಾಗಿದ್ದರು.
ಶಾಸಕಿ ಕೀರ್ತಿ ಕುಮಾರಿಯವರ ಅಕಾಲಿಕ ಮರಣಕ್ಕೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಸಂತಾಪ ಸೂಚಿಸಿದ್ದಾರೆ.
ಈ ರೋಗದ ಬಗ್ಗೆ ಜನತೆ ಎಚ್ಚೆತ್ತಕೊಳ್ಳುವ ಅವಶ್ಯಕತೆಯಿದೆ. ಮತ್ತು ಸರಕಾರ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕಾದ ತುರ್ತು ಅವಶ್ಯಕತೆಯಿದೆ.
