ಜಿಲ್ಲಾ ಸುದ್ದಿ

ಉಳ್ಳಾಲದಲ್ಲಿ ಏರಿಕೆಯಾಗುತ್ತಿರುವ ಸೋಂಕಿತರ ಸಂಖ್ಯೆ; ಮುನ್ನೆಚ್ಚರಿಕೆಗಾಗಿ ಸ್ವಯಂ ಪ್ರೇರಿತ ಸೀಲ್ ಡೌನ್  ಮಾಡಿದ ನಾಗರಿಕರು

ವರದಿಗಾರ (ಜೂನ್ 30): ಕೊರೋನಾ ಮಹಾಮಾರಿಯು ದೇಶವನ್ನು ದಿನದಿಂದ ದಿನಕ್ಕೆ ಕಾಡುತ್ತಲೇ ಇದ್ದು, ಕರ್ನಾಟಕ ರಾಜ್ಯದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕೆಲವೊಂದು ಕಡೆ ನಾಗರಿಕರು ಸ್ವಯಂ ಪ್ರೇರಿತರಾಗಿ ಸೀಲ್ ಡೌನ್ ಮೂಲಕ ವೈರಸ್ ವಿರುದ್ಧ ಹೋರಾಡಲು ಮುಂದಾಗಿದ್ದಾರೆ.

ಸ್ವಯಂ ಪ್ರೇರಿತ ಸೀಲ್ ಡೌನ್ ಬಗ್ಗೆ ‘ವರದಿಗಾರ’ ತಂಡದ ಜೊತೆ ಉಳ್ಳಾಲದ ಕೋಡಿ-ಕೋಟೆಪುರ ನಿವಾಸಿಗಳು ಮಾತನಾಡಿದ್ದಾರೆ.

ಉಳ್ಳಾಲದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕೋಡಿ-ಕೋಟೆಪುರದ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸೀಲ್ ಡೌನ್ ಮಾಡಿದ್ದಾರೆ. ಇದಕ್ಕೆ ಎಲ್ಲರೂ ಸಹಕರಿಸುವಂತೆ ಸ್ಥಳೀಯ ಮಸೀದಿ ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ. ಅದಲ್ಲದೆ ಉಳ್ಳಾಲ ನಗರದ ಸರ್ವ ಜನತೆಯು ಸ್ವಯಂ ಪ್ರೇರಿತರಾಗಿ ತಮ್ಮ ಪ್ರದೇಶಗಳನ್ನು ಸೀಲ್ ಡೌನ್ ಮಾಡಿ ವೈರಸ್ ವಿರುದ್ಧ ಹೋರಾಡುವಂತೆ ಅವರು ಕೇಳಿಕೊಂಡಿದ್ದಾರೆ. ಸಾರ್ವಜನಿಕರು ಮನೆಯೊಳಗಿದ್ದು, ಸಾಮಾಜಿಕ ಅಂತರ ಕಾಪಾಡುವಂತೆ ಮತ್ತು ಎಲ್ಲಾ ರೀತಿಯಲ್ಲೂ ಎಚ್ಚರಿಕೆ ವಹಿಸುವಂತೆ ಉಳ್ಳಾಲ ನಗರಸಭೆಯ ಕೌನ್ಸಿಲರ್ ರಮೀಝ್ ಮನವಿ ಮಾಡಿದ್ದಾರೆ. ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಮುಶರ್ರಫ್ ಉಳ್ಳಾಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವೀಡಿಯೋ ವೀಕ್ಷಿಸಿ

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group