ರಾಜ್ಯ ಸುದ್ದಿ

ಬಳ್ಳಾರಿ; ಮೃತದೇಹಗಳ ಅಂತ್ಯ ಸಂಸ್ಕಾರದ ವೇಳೆ ಅಮಾನವೀಯ ವರ್ತನೆಗೆ ಪಾಪ್ಯುಲರ್ ಫ್ರಂಟ್ ಖಂಡನೆ

ವರದಿಗಾರ (ಜು.01): ಬಳ್ಳಾರಿಯಲ್ಲಿ ಕೋವಿಡ್ ಬಾಧಿತ ಹಲವು ಮೃತದೇಹಗಳನ್ನು ಒಂದೇ ಗುಂಡಿಯಲ್ಲಿ ಹಾಕಿ ಅಂತ್ಯ ಸಂಸ್ಕಾರ ನಡೆಸಿರುವ ಘಟನೆಗೆ ಸಂಬಂಧಿಸಿ ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾ- ಪಿ.ಎಫ್.ಐ ಸಂಘಟನೆ ಖಂಡಿಸಿದ್ದು, ಆಘಾತ ವ್ಯಕ್ತಪಡಿಸಿದೆ.

ಮನುಷ್ಯತ್ವ ಮರೆತ ಸಿಬ್ಬಂದಿ ಯಾವುದೇ ಕರುಣೆ ತೋರದೆ ಮೃತದೇಹಗಳನ್ನು ಒಂದರ ಮೇಲೊಂದರಂತೆ ಎಸೆಯುತ್ತಿರುವ ದೃಶ್ಯ ವಿಡಿಯೋದಲ್ಲಿ ಬಹಳ ಸ್ಪಷ್ಟವಾಗಿ ಕಾಣುತ್ತಿದೆ. ಯಾವುದೇ‌ ಒಂದು ಮೃತದೇಹವು ತನ್ನದೇ ಆದ ಘನತೆಯನ್ನು ಹೊಂದಿರುತ್ತದೆ ಮತ್ತು ಅದನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವೂ ಅಗಿರುತ್ತದೆ. ಆದರೆ ಬಳ್ಳಾರಿಯಲ್ಲಿ ನಡೆದ ಈ ಘಟನೆಯು ಇಡೀ ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ನಾಸಿರ್ ಪಾಷಾ ಹೇಳಿದ್ದಾರೆ.

ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ನಿರ್ಲಕ್ಷ್ಯವು ಈ ಅಮಾನವೀಯ ಘಟನೆಗೆ ನೇರ ಕಾರಣವಾಗಿದೆ. ಈ ಘಟನೆಗೆ ಕಾರಣರಾದವರ ಮೇಲೆ ಕೂಡಲೇ ಕ್ರಮ ಜರಗಿಸಬೇಕು, ಇಂತಹ ಘಟನೆಗಳು ಮರುಕಳಿಸದಂತೆ‌ ಎಚ್ಚರ ವಹಿಸಬೇಕು ಮತ್ತು ಆಯಾ ಧರ್ಮೀಯರ ವಿಧಿ ವಿಧಾನದಂತೆ ಮೃತದೇಹ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಬೇಕೆಂದು ನಾಸಿರ್ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಬಳ್ಳಾರಿ; ಕೊರೋನಾ ಸೋಂಕಿತರ 8 ಶವಗಳನ್ನು ತ್ಯಾಜ್ಯದ ಗುಂಡಿಗೆ ಎಸೆದು ಅಮಾನವೀಯತೆ ಮೆರೆದ ಘಟನೆ: ವ್ಯಾಪಕ ಆಕ್ರೋಶ!

ಆರೋಗ್ಯ ಇಲಾಖೆಯಡಿ ತಜ್ಞ ವೈದ್ಯರಿಂದ ತರಬೇತು ಪಡೆದ ಪಾಪ್ಯುಲರ್ ಫ್ರಂಟ್‌ ಕಾರ್ಯಕರ್ತರು ಈಗಾಗಲೇ ಕರ್ನಾಟಕ ರಾಜ್ಯದ ರಾಮನಗರ, ಬೆಂಗಳೂರು ಮತ್ತು ಮಂಗಳೂರು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಸುಮಾರು 350ಕ್ಕೂ ಹೆಚ್ಚು ಕೋವಿಡ್ ಬಾಧಿತ ಮೃತದೇಹಗಳನ್ನು ಆಯಾ ಧರ್ಮದವರ ವಿಧಿವಿಧಾನದಂತೆ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾರೆ. ರಾಜ್ಯದಲ್ಲಿ ಇಂತಹ ಮಾನವೀಯ ಕಾರ್ಯಕ್ಕೆ ಪಾಪ್ಯುಲರ್ ಫ್ರಂಟ್ ‌ನ ಕಾರ್ಯಕರ್ತರು ಸದಾ ಸಿದ್ಧರಿದ್ದಾರೆ ಎಂದು ನಾಸಿರ್ ಪಾಷಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group