ರಾಷ್ಟ್ರೀಯ ಸುದ್ದಿ

ಮೋದಿ ಸರಕಾರದ ಹೇಡಿತನಗಳಿಂದಾಗಿ ಭಾರತ ಭಾರೀ ಬೆಲೆ ತೆರಲಿದೆ: ರಾಹುಲ್ ಗಾಂಧಿ ಎಚ್ಚರಿಕೆ

ಭಾರತ-ಚೀನಾ ಗಡಿ ವಿವಾದದ ಬಗ್ಗೆ ಪ್ರತಿಕ್ರಿಯೆ

ವರದಿಗಾರ (ಜು.18): ಭಾರತ- ಚೀನಾ ಗಡಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೋದಿ ಸರ್ಕಾರದ ಹೇಡಿತನದ ಕ್ರಮಗಳಿಂದ ಭಾರತ ಭಾರೀ ಬೆಲೆ ತೆರಬೇಕಾದೀತು ಎಂದು ಎಚ್ಚರಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ವೀಡಿಯೋ ತುಣುಕಿನೊಂದಿಗೆ ಪ್ರತಿಕ್ರಿಯಿಸುತ್ತಾ, ‘ಚೀನಾ ನಮ್ಮ ಭೂಮಿಯನ್ನು ವಶ ಪಡಿಸಿಕೊಂಡಿದೆ. ಭಾರತ ಸರಕಾರವು ಚೇಂಬರ್ಲೇನ್ ರೀತಿಯಲ್ಲಿ ವರ್ತಿಸುತ್ತಿದೆ. ಇದು ಚೀನಾಕ್ಕೆ ಮತ್ತಷ್ಟು ಧೈರ್ಯ ತುಂಬುತ್ತಿದೆ. ಭಾರತ ಸರ್ಕಾರದ ಹೇಡಿತನದ ಕ್ರಮಗಳಿಂದಾಗಿ ದೇಶವು, ಭಾರೀ ಬೆಲೆ ತೆರಲಿದೆ’ ಎಂದು ರಾಹುಲ್ಲ ಗಾಂಧಿ ಎಚ್ಚರಿಸಿದ್ದಾರೆ.

1930 ರ ದಶಕದಲ್ಲಿ ಅಡಾಲ್ಫ್ ಹಿಟ್ಲರ್ ಮತ್ತು ಜರ್ಮನಿಯ ಬಗ್ಗೆ ಓಲೈಸು ನೀತಿಯನ್ನು ಅನುಸರಿಸಿದ ದಿವಂಗತ ಬ್ರಿಟಿಷ್ ಪ್ರಧಾನಿ ನೆವಿಲ್ಲೆ ಚೇಂಬರ್ಲೇನ್ ಅವರನ್ನು ರಾಹುಲ್‍ ಗಾಂಧಿ ಉಲ್ಲೇಖಿಸಿದ್ದಾರೆ.

ಲಡಾಖ್ ಮತ್ತು ಶ್ರೀನಗರಕ್ಕೆ 2 ದಿನಗಳ ಭೇಟಿಯಲ್ಲಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೇಹ್‌ಗೆ ಆಗಮಿಸಿದ್ದು, ಟಿ -90 ಟ್ಯಾಂಕ್‌ಗಳು ಮತ್ತು ಯುದ್ಧ ವಾಹನಗಳ ವ್ಯಾಯಾಮ, ಕಸರತ್ತನ್ನು ಲೇಹ್‌ನ ಸ್ಟಕ್ನಾದಲ್ಲಿ ವೀಕ್ಷಿಸಿದರು.
ಲುಕುಂಗ್ ಫಾರ್ವರ್ಡ್ ಬೇಸ್‌ನಲ್ಲಿರುವ ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಐಟಿಬಿಪಿಯ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ್ದ ಸಿಂಗ್, ‘ಗಡಿ ವಿವಾದವನ್ನು ಬಗೆಹರಿಸಲು ಮಾತುಕತೆ ನಡೆಯುತ್ತಿದೆ ಆದರೆ ಅದನ್ನು ಎಷ್ಟರ ಮಟ್ಟಿಗೆ ಪರಿಹರಿಸಬಹುದೆಂದು ನಾನು ಖಾತರಿಪಡಿಸುವುದಿಲ್ಲ. ನಾನು ನಿಮಗೆ ಭರವಸೆ ನೀಡಬಲ್ಲೆ, ನಮ್ಮ ಭೂಮಿಯ ಒಂದು ಇಂಚು ಸಹ ಜಗತ್ತಿನ ಯಾವುದೇ ಶಕ್ತಿಗಳು ಕಸಿದುಕೊಳ್ಳಲಾಗುವುದಿಲ್ಲ. ಮಾತುಕತೆಯಿಂದ ಪರಿಹಾರವನ್ನು ಕಂಡುಹಿಡಿಯಬಹುದಾದರೆ, ಇದಕ್ಕಿಂತ ಉತ್ತಮ ಅವಕಾಶ ಬೇರೆ ಏನು ಇಲ್ಲ; ಎಂದು ಹೇಳಿಕೊಂಡಿದ್ದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group