ರಾಜ್ಯ ಸುದ್ದಿ

ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ, ಆರೋಗ್ಯ ಸಚಿವರು ತಕ್ಷಣ ರಾಜೀನಾಮೆ ನೀಡುವಂತೆ ಆಪ್ ಆಗ್ರಹ

ಕೊವೀಡ್-19 ಸರಕಾರದ ಹಗರಣಗಳನ್ನು ನ್ಯಾಯಾಂಗ ತನಿಖೆಗೆ ಒತ್ತಾಯ

ವರದಿಗಾರ (ಜು.23): ಕೋವಿಡ್-19 ಸೋಂಕು ನಿರ್ವಹಣೆಗೆ ಸಂಬಂಧಿಸಿದಂತೆ ನೈತಿಕ ಹೊಣೆಯನ್ನು ಹೊತ್ತು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ತಕ್ಷಣ ರಾಜೀನಾಮೆ ನೀಡುವಂತೆ ಆಮ್ ಆದ್ಮಿ ಪಕ್ಷವು ಆಗ್ರಹಿಸಿದೆ.

ಆಮ್ ಆದ್ಮಿ ಪಕ್ಷವು ಪ್ರಾರಂಭದಿಂದಲೂ ಕೋರೋನ   ನಿಯಂತ್ರಣದ  ವಿಷಯದಲ್ಲಿ ಸರ್ಕಾರವು ಹಾಗೂ ಬಿಬಿಎಂಪಿ ಸಾಕಷ್ಟು ಭ್ರಷ್ಟಾಚಾರವನ್ನು ಎಸಗುತ್ತಿದೆ  ಎಂಬ ಆರೋಪವನ್ನು ಮಾಡಿಕೊಂಡೆ ಬರುತ್ತಿದೆ.

ಇಂತಹ  ಸಂದಿಗ್ಧ ಸಮಯದಲ್ಲಿ ರಾಜ್ಯ ಸರ್ಕಾರವು  ವೈದ್ಯಕೀಯ ಉಪಕರಣಗಳು ಹಾಗೂ ರೋಗ ನಿಯಂತ್ರಣ ಸಾಮಗ್ರಿಗಳ ಖರೀದಿಯಲ್ಲಿ 2000 ಕೋಟಿಗಳಿಗೂ ಅಧಿಕ ಭ್ರಷ್ಟಾಚಾರವನ್ನು ಎಸಗಿರುವ ಆರೋಪವನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ದಾಖಲೆಗಳ ಸಮೇತ ಬಿಡುಗಡೆ ಮಾಡಿರುವುದನ್ನು ಉಲ್ಲೇಖಿಸಿ ಪತ್ರಿಕಾ ಪ್ರಕಟಣೆ ನೀಡಿರುವ ಆಮ್ ಆದ್ಮಿ ಪಕ್ಷವು, ಕಳಪೆ ಪಿಪಿಇ ಕಿಟ್, ವೆಂಟಿಲೇಟರ್ ಗಳು, ಮಾಸ್ಕ್, ಸ್ಯಾನಿಟೈಸರ್, ಪಲ್ಸ್ ಆಕ್ಸಿ ಮೀಟರ್ ಗಳು ಸೇರಿದಂತೆ ಇನ್ನಿತರ ವೈದ್ಯಕೀಯ ಸಾಮಾಗ್ರಿಗಳ ಖರೀದಿ ವಿಚಾರದಲ್ಲಿ  ದುಪ್ಪಟ್ಟು ಬೆಲೆಯನ್ನು ನೀಡಿ ಅವ್ಯವಹಾರವನ್ನು ಎಸಗಿರುವುದು ಆರೋಗ್ಯ ಮಂತ್ರಿಗಳ ಮಾತಿನಲ್ಲೇ ಕೇಳಿ ಬರುತ್ತಿದೆ ಎಂದು ಆಪ್ ಆರೋಪಿಸಿದೆ.

ಪೂರೈಕೆದಾರರು ಹೆಚ್ಚಿನ ಬೆಲೆಯನ್ನು ಬೇಡಿಕೆ ಇಟ್ಟಿದ್ದರಿಂದ ಕೊಂಡುಕೊಳ್ಳುವ ಅನಿವಾರ್ಯತೆ ಬಂದಿದೆ ಎಂಬ ಅಸಹಾಯಕ ಉತ್ತರವನ್ನು ಆರೋಗ್ಯ  ಮಂತ್ರಿಗಳಾಗಿ ಶ್ರೀರಾಮುಲು  ನೀಡುತ್ತಿರುವುದು ಹಾಸ್ಯಾಸ್ಪದವೆನಿಸುತ್ತದೆ ಎಂದು ಖೇಧ ವ್ಯಕ್ತಪಡಿಸಿದೆ.

ಸರ್ಕಾರ ಹಾಗೂ ಅಧಿಕಾರಿಗಳು ನೇರವಾಗಿ ಪೂರೈಕೆದಾರರೊಂದಿಗೆ ಅನೈತಿಕವಾಗಿ ಕೈಜೋಡಿಸಿ ಸಾವಿರಾರು ಕೋಟಿ ರೂ. ಗಳನ್ನು ಇಂತಹ ಮಹಾದುರಂತದ ಸಮಯದಲ್ಲಿ  ಲಪಟಾಯಿಸಿರುವುದು ಕಂಡುಬರುತ್ತದೆ ಎಂದು ಹೇಳಿದೆ.

ಇಂತಹ ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ಜನತೆಯ ಆರೋಗ್ಯ ದೃಷ್ಟಿಗಾಗಿ ಟೆಂಡರ್ ಪ್ರಕ್ರಿಯೆಗಳಲ್ಲಿ ಪಾರದರ್ಶಕ ಕಾಯಿದೆಯನ್ನು ತೆಗೆದು ಹಾಕುವ ಮಹತ್ತರ ಉದ್ದೇಶವನ್ನೇ ದುರ್ಬಳಕೆ ಮಾಡಿಕೊಂಡು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಅಮಾನವೀಯವಾದ ಅಮಾನುಷವಾದ ಹಣ ಮಾಡುವ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿರುವುದು ತೀರಾ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದೆ.

ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜೀನಾಮೆಯನ್ನು ನೀಡಿ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಯನ್ನು ಕೈಗೊಳ್ಳಬೇಕೆಂದು ಆಮ್ ಆದ್ಮಿ ಪಕ್ಷವು ಒತ್ತಾಯಿಸಿದೆ.

ಈ ಬಗ್ಗೆ ರಾಷ್ಟ್ರಪತಿಗಳು ಹಾಗೂ ರಾಜ್ಯಪಾಲರಿಗೆ ದೂರು ನೀಡುವುದಾಗಿ ಪ್ರಕಟಣೆಯಲ್ಲಿ ಆಮ್ ಆದ್ಮಿ ಪಕ್ಷದ ಯಲಹಂಕ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಪಣಿರಾಜ್.ಎಸ್.ವಿ ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group