ರಾಜ್ಯ ಸುದ್ದಿ

ಆರೋಗ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ: ಸಚಿವ ಡಾ.ಸುಧಾಕರ್ ಗೆ ಹಿಗ್ಗಾಮುಗ್ಗ ತರಾಟೆ

‘ಸಾಯಿಸಿಯೇ ಬಿಟ್ರಲ್ವಾ. ಈಗಲಾದರೂ ಸಮಾಧಾನವಾಯಿತೇ?’

ವರದಿಗಾರ ( ಆ.21): ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ.ನಾಗೇಂದ್ರ ಅವರ ಪ್ರಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಲು ಆಗಮಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರನ್ನು ವೈದ್ಯೆಯೊಬ್ಬರು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಮೈಸೂರಿನ ಆಲನಹಳ್ಳಿ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿಯೇ ನಾಗೇಂದ್ರ ಅವರು ಗುರುವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆಲಸದ ಒತ್ತಡ ಹಾಗೂ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದ ಸದಸ್ಯರು ಮತ್ತು ಇತರ ವೈದ್ಯರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನಿನ್ನೆ ರಾತ್ರಿ ಘಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಸುಧಾಕರ್ ಅವರ ವಿರುದ್ಧ ಆಕ್ರೋಶಗೊಂಡ ಮಹಿಳಾ ವೈದ್ಯರೊಬ್ಬರು, ಕೊನೆಗೂ ನಾಗೇಂದ್ರ ಅವರನ್ನು ಸಾಯಿಸಿದ್ದರಲ್ಲಾ, ಸಮಾಧಾನವಾಯಿತಾ, ನಿಮಗೆ ಯೋಗ್ಯತೆ ಇದೆಯಾ…ಛೀ…ಥೂ ಎಂದು ಕಿಡಿಕಾರಿದರು.

ನಿಮಗೆ ಸಾಧ್ಯವಾದರೆ ನಾಗೇಂದ್ರ  ಅವರನ್ನು ಬದುಕಿಸಿಕೊಡಿ, ನಿಮ್ಮ 30 ಲಕ್ಷ ಪರಿಹಾರ ಯಾರಿಗೆ ಬೇಕು, ವೈದ್ಯರೆಲ್ಲಾ ಒಂದು ತಿಂಗಳ ಸಂಬಳ ಕೊಟ್ಟರೆ  ಕೋಟಿ ರೂಪಾಯಿ ಆಗುತ್ತದೆ. ನೀವು ಇಲ್ಲಿಂದ ತೊಲಗಿ, ನನ್ನ ಮೇಲೂ ಒತ್ತಡ ಆಗುತ್ತಿದೆ ಎಂದು ಆರೋಪಿಸಿದರು.

ನಾಗೇಂದ್ರ ಅವರ ಸಾವಿಗೆ ಕಾರಣರಾದ ಅಧಿಕಾರಿಗಳನ್ನು ಅಮಾನತುಪಡಿಸಬೇಕು ಹಾಗೂ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ವೈದ್ಯರ ಸಂಘ ಆಗ್ರಹಿಸಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group