ರಾಜ್ಯ ಸುದ್ದಿ

ಹಿಂದೂಗಳ ಪರವೆಂಬ ನಿಮ್ಮ ನಕಲಿ ಕಾಳಜಿಯನ್ನು ನಿಲ್ಲಿಸಿ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಟ್ವೀಟ್ ಗೆ ಸಿದ್ದು ಮರುಪ್ರಹಾರ

‘ಪರೇಶ್ ಮೇಸ್ತಾ ಸಾವಿನ ನೈಜತೆ ಬಯಲಿಗೆಳೆಯಲು ಹಿಂಜರಿಕೆಯೇಕೆ?

‘ವಿನಾಯಕ ಬಾಳಿಗಾ ಕುಟುಂಬಕ್ಕೆ ಯಾವಾಗ ನ್ಯಾಯ ಕೊಡಿಸುತ್ತೀರಿ?’

ವರದಿಗಾರ, (ಆ.22): “ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಕಲಿ ನಾಯಕ” ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಬುದ್ದಿವಂತರ ಜಿಲ್ಲೆ‌ ಎಂಬ ದಕ್ಷಿಣ ಕನ್ನಡದ ಖ್ಯಾತಿಗೆ ಅಸೂಯೆಪಟ್ಟು ಬಿಜೆಪಿ ವರಿಷ್ಠರು ನಳಿನ್ ಕುಮಾರ್ ಕಟೀಲ್ ಎಂಬ ನಕಲಿ ಶ್ಯಾಮನನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿರಬಹುದು,  ಇಲ್ಲವೇ ಪಕ್ಷದಲ್ಲಿ ಈ ಮಟ್ಟದ ಬೌದ್ದಿಕ ದಾರಿದ್ರ್ಯ ಇದ್ದಿರಬಹುದು’ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನಳಿನ್ ಕುಮಾರ್ ಕಟೀಲ್ ಅವರೇ,  ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆಯ ಪ್ರಕರಣ ತನಿಖೆಯನ್ನು ಸಿಬಿಐ ನಡೆಸುತ್ತಿದೆ, ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಹಿಂದೂ ಪರೇಶ್ ಮೇಸ್ತನ ಕುಟುಂಬಕ್ಕೆ ನ್ಯಾಯ ಯಾವಾಗ ಕೊಡಿಸುವಿರಿ? ಎಂದು  ಪ್ರಶ್ನಿಸಿದ್ದಾರೆ.

ಹಿಂದು ಧರ್ಮಕ್ಕೆ ಸೇರಿರುವ ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನಿಮ್ಮ ಖಾಸಾ ದೋಸ್ತ್ ನರೇಶ್ ಶೆಣೈಯನ್ನು ರಕ್ಷಿಸುತ್ತಿರುವವರು ಯಾರೆಂದು ತಿಳಿಸುವಿರಾ?  ಬಾಳಿಗರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಅವರ ಸೋದರಿಯರಿಗೆ ಯಾವಾಗ ನ್ಯಾಯಕೊಡಿಸುತ್ತೀರಿ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಹಿಂದುಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನಳಿನ್ ಕುಮಾರ್ ಕಟೀಲ್  ಅವರೇ, ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್, ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳು ಯಾರೆಂದು ತಿಳಿಸುವಿರಾ? ಎಂದು ಪ್ರಶ್ನಿಸಿದ್ದಾರೆ.

ಮಾತ್ರವಲ್ಲ ಬಿಜೆಪಿ ಹೇಳಿದ ಮತ್ತು ಹೇಳದೆ ಮರೆಮಾಚಿದ ಸಾವಿನ ಹಿಂದಿನ ರಹಸ್ಯಗಳು ಎಂಬ ಲೇಖನದ ಪುಟವನ್ನೂ ಸಿದ್ದರಾಮಯ್ಯ ತಮ್ಮ ಟ್ವೀಟ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group