ಜಿಲ್ಲಾ ಸುದ್ದಿ

ಪಂಪ್‌ವೆಲ್ ಮಸ್ಜಿದ್‌ಗೆ ಹಾನಿ: ಶೀಘ್ರ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

ವರದಿಗಾರ (ಆ.22): ಪಂಪ್‌ವೆಲ್ ಮಸ್ಜಿದ್‌ಗೆ ಹಾನಿ ಎಸಗಿ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸಲು ಯತ್ನಿಸಿದ ದುಷ್ಕರ್ಮಿಗಳ ಕಿಡಿಗೇಡಿ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ನಗರಾಧ್ಯಕ್ಷ ಖಾದರ್ ಕುಲಾಯಿ, ಇದರ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಶಾಂತಿ ಕದಡುವ ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ. ಕೆಲ ದಿನಗಳ ಹಿಂದೆ ಮಂಗಳೂರಿನ ಮೌಲಾನಾ ಆಝಾದ್ ಅಲ್ಪಸಂಖ್ಯಾತರ ಭವನಕ್ಕೆ ಕಲ್ಲೆಸೆದು ಹಾನಿ ಉಂಟು ಮಾಡಲಾಗಿತ್ತು. ಅದಕ್ಕೂ ಮೊದಲು ಮುಸ್ಲಿಮ್ ಯುವಕರ ಮೇಲೆ ದಾಳಿ ನಡೆಸಿದ ಘಟನೆಗಳೂ ವರದಿಯಾಗಿದ್ದವು. ಇವೆಲ್ಲವೂ ಶಾಂತಿಯುತವಾಗಿರುವ ಈ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕಡಡುವ ಷಡ್ಯಂತ್ರಗಳಾಗಿವೆ. ಇದೀಗ ಮಸ್ಜಿದ್ ಮೇಲಿನ ದಾಳಿಯು ಇದರ ಮುಂದುವರಿದ ಭಾಗಿವಾಗಿದೆ.

ಕೋಮು ಸಾಮರಸ್ಯ ಕೆಡಿಸುವ ಉದ್ದೇಶದಿಂದ ಸಂಘಪರಿವಾರದ ಹಿನ್ನೆಲೆ ಇರುವ ಗೂಂಡಾಗಳು ನಡೆಸುತ್ತಿರುವ ಇಂತಹ ಕೃತ್ಯಗಳಿಗೆ ಕೂಡಲೇ ಕಡಿವಾಣ ಹಾಕಬೇಕು. ದುಷ್ಕರ್ಮಿಗಳ ಜಾಲವನ್ನು ಭೇದಿಸಿ ಅವರ ವಿರುದ್ಧ ಜಾಮೀನುರಹಿತ ಪ್ರಕರಣ ದಾಖಲಿಸಬೇಕು. ಮತ್ತು ಜಿಲ್ಲೆಯಲ್ಲಿ ಶಾಂತಿಯ ವಾತಾವರಣವನ್ನು ಖಾತರಿಪಡಿಸಬೇಕೆಂದು ಖಾದರ್ ಕುಲಾಯಿ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group