ರಾಷ್ಟ್ರೀಯ ಸುದ್ದಿ

ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅಸ್ಸಾಂ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ; ತರುಣ್ ಗೊಗೊಯಿ ಭವಿಷ್ಯ

‘ರಾಮಮಂದಿರ ಪರ ತೀರ್ಪಿಗೆ ಬಿಜೆಪಿಯಿಂದ ಉಡುಗೊರೆ’

ವರದಿಗಾರ (ಆ.23): ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ಅಸ್ಸಾಂನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಅಸ್ಸಾಂ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ತರುಣ್ ಗೊಗೊಯಿ ಭವಿಷ್ಯ ನುಡಿದಿದ್ದಾರೆ.

ಬಿಜೆಪಿಯ ಮುಖ್ಯಮಂತ್ರಿ ಹುದ್ದೆಯ ಅಭ್ಯರ್ಥಿಗಳ ಪಟ್ಟಿಯಲ್ಲಿ ರಂಜನ್ ಗೊಗೊಯಿ ಹೆಸರಿದೆ ಎಂದು ತಮಗೆ ಬಲ್ಲ ಮೂಲಗಳಿಂದ ತಿಳಿದಿದೆ. ಖಂಡಿತವಾಗಿಯೂ ಅವರನ್ನು ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಲಿದೆ ಎಂದು ತರುಣ್ ಗೊಗೊಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಾಜಿ ಮುಖ್ಯನ್ಯಾಯಮೂರ್ತಿ ಗೊಗೊಯಿ ರಾಜ್ಯಸಭೆ ಸದಸ್ಯರಾಗಿ ನೇಮಕವಾಗಲಿದ್ದಾರೆ. ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಸ್ಥಾನವನ್ನೂ ಅವರು ಒಪ್ಪಿಕೊಳ್ಳಲಿದ್ದಾರೆ ಎಂದು ತರುಣ್‌ ಹೇಳಿದರು.

ಇವೆಲ್ಲವೂ ರಾಜಕೀಯಕ್ಕಾಗಿ, ರಂಜನ್ ಗೊಗೊಯಿ ಅಯೋಧ್ಯೆಯ ರಾಮಮಂದಿರ ಪರವಾಗಿ ತೀರ್ಪು ನೀಡಿದ್ದರಿಂದ ಬಿಜೆಪಿ ಅವರ ಬಗ್ಗೆ ಸಂತುಷ್ಟಗೊಂಡಿದೆ. ರಾಜ್ಯಸಭಾ ಸ್ಥಾನ ಒಪ್ಪಿಕೊಳ್ಳುವ ಮೂಲಕ ಗೊಗೊಯಿ ಅವರು ಹಂತ ಹಂತವಾಗಿ ರಾಜಕೀಯ ಪ್ರವೇಶಿಸಲಿದ್ದಾರೆ. ಯಾಕಾಗಿ ಅವರು ರಾಜ್ಯಸಭಾ ಸ್ಥಾನ ನಿರಾಕರಿಸಲಿಲ್ಲ ?. ಅವರು ಸುಲಭವಾಗಿ ಮಾನವ ಹಕ್ಕುಗಳ ಆಯೋಗ ಅಥವಾ ಇತರ ಸಂಸ್ಥೆಗಳ ಅಧ್ಯಕ್ಷರಾಗಬಹುದಿತ್ತು. ಅವರಿಗೆ ರಾಜಕೀಯ ಮಹತ್ವಾಕಾಂಕ್ಷೆಯಿದೆ. ಆದ್ದರಿಂದಲೆ ಅವರು ರಾಜ್ಯಸಭಾ ಸ್ಥಾನವನ್ನು ನಿರಾಕರಿಸಲಿಲ್ಲ ಎಂದು ತರುಣ್ ಗೊಗೊಯಿ ಟೀಕಾಪ್ರಹಾರ ನಡೆಸಿದ್ದಾರೆ.

“ತಾವು ರಾಜ್ಯದ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ಮಾರ್ಗದರ್ಶಕನಾಗಿರಲು ಬಯಸುತ್ತೇನೆ ಅಥವಾ ಸಲಹೆಗಾರನಾಗಿ ಕಾರ್ಯನಿರ್ವಹಿಸುತ್ತೇನೆ. ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಹಲವು ಮಂದಿ ಅರ್ಹ ಅಭ್ಯರ್ಥಿಗಳಿದ್ದಾರೆ, ಅವರು ಅಧಿಕಾರ ವಹಿಸಿಕೊಳ್ಳಬಹುದು ಎಂದು ತರುಣ್ ಸ್ಪಷ್ಪಪಡಿಸಿದರು.

ಅತ್ಯಂತ ವಿವಾದಿತ ಮುಖ್ಯ ನ್ಯಾಯಮೂರ್ತಿ ಎಂಬ ಕುಖ್ಯಾತಿಗೆ ಪಾತ್ರರಾಗಿರುವ ರಂಜನ್ ಗೊಗೊಯಿ ಅಧಿಕಾರದಲ್ಲಿದ್ದಾಗ ಆಡಳಿತ ಪಕ್ಷದ ಪರವಾಗಿ ಹಲವು ತೀರ್ಪುಗಳನ್ನು ನೀಡಿದ್ದರು. ಅವರು ರಾಜಕೀಯ ಪ್ರವೇಶಿಸಲಿದ್ದಾರೆ ಎಂಬ ಅನುಮಾನ ದೇಶದ ಜನರಲ್ಲಿ ಇತ್ತು. ಇದೀಗ ಈ ಅನುಮಾನಗಳು ನಿಜವಾಗುತ್ತಿವೆ. ಅವರು ನೀಡಿದ ತೀರ್ಪುಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಂಶಯ ಮೂಡುತ್ತಿರುವುದು ಸುಳ್ಳಲ್ಲ !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group