ರಾಜ್ಯ ಸುದ್ದಿ

ವಿಮಾನ ನಿಲ್ದಾಣ ಅದಾನಿ ಕಂಪನಿಯ ಗುತ್ತಿಗೆಗೆ ನೀಡುವುದಿಲ್ಲ: ಕೇರಳ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ವರದಿಗಾರ, (ಆ.24):  ಕೇರಳದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪನಿಗೆ ಗುತ್ತಿಗೆ ನೀಡುವುದರ ವಿರುದ್ಧ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಅಂಗೀಕರಿಸಿದೆ.

ಆಡಳಿತದ ಪಕ್ಷದ ನಿರ್ಣಯಕ್ಕೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಕೂಡ ಸಮ್ಮತಿ ನೀಡಿದೆ.

ಕೇಂದ್ರ ಸರ್ಕಾರ ತನ್ನ ತೀರ್ಮಾನವನ್ನು ಕೂಡಲೇ ಹಿಂಪಡೆಯಬೇಕು. ಕೇಂದ್ರದ ಕ್ರಮ ದೇಶೀಯ  ವಿಮಾನಯಾನ ವಲಯವನ್ನು ಖಾಸಗಿಯವರಿಗೆ ಧಾರೆ ಎರೆಯುವ ಕುತಂತ್ರ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ತನ್ನ ತೀರ್ಮಾನವನ್ನು ಮತ್ತೊಮ್ಮೆ ಪರಿಶೀಲಿಸಬೇಕು. ವಿಮಾನ ನಿಲ್ದಾಣಗಳಲ್ಲಿ  ರಾಜ್ಯ ಸರ್ಕಾರಗಳಿಗೂ ಪಾಲು ಇದೆ ಎಂಬುದನ್ನು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಕೇರಳ  ಆಡಳಿತಾರೂಢ ಪಕ್ಷದ ತೀರ್ಮಾನಕ್ಕೆ  ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಪ್ರಧಾನ ಪ್ರತಿಪಕ್ಷ  ಕಾಂಗ್ರೆಸ್,  ಆಡಳಿತ ಪಕ್ಷ ಇಬ್ಬುಗೆಯ ನಿಲುವು ಅನುಸರಿಸುತ್ತಿದೆ. ಅದಾನಿ  ಬಿಡ್ ಮಾಡಿರುವ  ಮೊತ್ತವನ್ನು ಪಾವತಿಸಲು ಒಪ್ಪಿಕೊಂಡಿರುವ ಸರ್ಕಾರ, ಬಹಿರಂಗವಾಗಿ ಖಾಸಗೀಕರಣ ವಿರುದ್ಧವಾಗಿ ಮಾತನಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ  ರಮೇಶ್ ಚೆನ್ನಿತಲ ಟೀಕಿಸಿದರು.

ಬಳಿಕ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group