ರಾಷ್ಟ್ರೀಯ ಸುದ್ದಿ

ರಾಜಕೀಯಕ್ಕೆ ಎಂಟ್ರಿ ಕೊಡುವುದಿಲ್ಲವೆಂದಿದ್ದ ಅಣ್ಣಾ ಮಲೈ ಬಿಜೆಪಿಗೆ ಸೇರ್ಪಡೆ

ಬಿಜೆಪಿ ಸೇರ್ಪಡೆಯ ಸಂಶಯಗಳಿಗೆ ತೆರೆ!

ವರದಿಗಾರ, (ಆ.25): ರಾಜಕೀಯಕ್ಕೆ ಎಂಟ್ರಿ ಕೊಡುವುದಿಲ್ಲವೆಂದಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸ್ವಾಮಿ, ಮಂಗಳವಾರ ನಿರೀಕ್ಷೆಯಂತೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಅಣ್ಣಾಮಲೈ ಮೇಲಿದ್ದ ಸಂಶಯಗಳಿಗೆ  ತೆರೆ ಎಳೆದಿದ್ದಾರೆ.

ತಮಿಳುನಾಡಿನಲ್ಲಿ ಪಕ್ಷ ಸಂಘಟನೆಗೆ ಮುಂದಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರಿನಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಂಗಳೂರಿನಲ್ಲಿ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದ ಅವರು, ಸ್ವಯಂ ನಿವೃತ್ತಿ ಪಡೆದಿದ್ದರು. ಆ ಸಂದರ್ಭದಲ್ಲೇ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.

‘ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿಯೊಂದೇ ರಾಷ್ಟ್ರೀಯವಾದಿ ಪಕ್ಷವಾಗಿದ್ದು, ನಾನು ಕೂಡ ರಾಷ್ಟ್ರವಾದಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತೇನೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಿರುವುದಾಗಿ ಅಣ್ಣಾಮಲೈ ಹೇಳಿಕೊಂಡಿರುವುದಾಗಿ ಮೂಲಗಳು ವರದಿ ಮಾಡಿವೆ. ಪ್ರಧಾನಿ ಮೋದಿ ಅವರ ಕಾರ್ಯವೈಖರಿಯನ್ನು ಮೆಚ್ಚಿ ಯಾವುದೇ ಷರತ್ತುಗಳಲ್ಲಿದೇ ಬಿಜೆಪಿಯನ್ನು ಸೇರುತ್ತಿರುವುದಾಗಿ ಅಣ್ಣಾಮಲೈ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಒಂದು ದಶಕಕ್ಕೂ ಅಧಿಕ ಕಾಲ ಸೇವೆ ಸಲ್ಲಿಸಿರುವ ಈ ಮಾಜಿ ಐಪಿಎಸ್ ಅಧಿಕಾರಿ, ಇದೀಗ ತನ್ನ ಎರಡನೆ ಇನ್ನಿಂಗ್ಸ್ ಅನ್ನು ರಾಜಕೀಯದಲ್ಲಿ ಆರಂಭಿಸಲಿದ್ದಾರೆ.

ದ್ರಾವಿಡ ಹೋರಾಟದ ನೆಲೆಬೀಡಾದ ತಮಿಳುನಾಡಿನಲ್ಲಿ ಬಿಜೆಪಿಯ ಅಣ್ಣಾಮಲೈ ರಾಜಕಾರಣ ಎಷ್ಟರ ಮಟ್ಟಿಗೆ ಯಶಸ್ವಿಯಾಗಬಹುದು ಎಂಬುದನ್ನು ಕಾದುನೋಡಬೇಕಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group