ರಾಷ್ಟ್ರೀಯ ಸುದ್ದಿ

ದೆಹಲಿ: ಆಪ್ ವಿರುದ್ಧದ ಅಭಿಯಾನಕ್ಕೆ ಅಣ್ಣಾ ಹಜಾರೆಯನ್ನು  ಆಮಂತ್ರಿಸಿದ ಬಿಜೆಪಿ

ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವಂತೆ ಹಜಾರೆಗೆ ಬಿಜೆಪಿಯ ಕೋರಿಕೆ

ವರದಿಗಾರ (ಆ.25): ಒಂದು ಕಾಲದಲ್ಲಿ ಅರವಿಂದ ಕೇಜ್ರಿವಾಲ್‌ ಅವರೊಂದಿಗೆ ಸೇರಿ ಕೇಂದ್ರದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯನ್ನು ಬಿಜೆಪಿ ಇದೀಗ ಅದೇ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧದ ಹೋರಾಟಕ್ಕೆ ಬಳಸಿಕೊಳ್ಳಲು ಮುಂದಾಗಿದೆ.

ದೆಹಲಿಯ ಎಎಪಿ ಸರ್ಕಾರದ ವಿರುದ್ಧ ಬೃಹತ್ ಆಂದೋಲನವನ್ನು ಬಿಜೆಪಿ ಹಮ್ಮಿಕೊಂಡಿದ್ದು, ಇದರಲ್ಲಿ ಭಾಗವಹಿಸಬೇಕೆಂದು ಅಣ್ಣಾ ಹಜಾರೆಗೆ ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಆದೇಶ್ ಗುಪ್ತಾ ಸೋಮವಾರ ಪತ್ರ ಬರೆದಿದ್ದಾರೆ.

ರಾಜಕೀಯ ಪರಿಶುದ್ಧತೆಯನ್ನು ಆಪ್ ಪಕ್ಷ ನಾಶ ಮಾಡಿದೆ. 53 ಜನರ ಸಾವಿಗೆ ಕಾರಣವಾದ ಫೆಬ್ರವರಿಯಲ್ಲಿ ದಿಲ್ಲಿಯಲ್ಲಿ ನಡೆದಿದ್ದ ಹಿಂಸಾಚಾರವನ್ನು ಎಎಪಿಯೇ ರೂಪಿಸಿತ್ತು ಎಂದು ಹಜಾರೆಗೆ ಬರೆದಿರುವ ಪತ್ರದಲ್ಲಿ ಗುಪ್ತಾ ತಿಳಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಹಗರಣಗಳ ವಿರುದ್ಧ 2011ರಲ್ಲಿ ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಅಣ್ಣಾ ಹಜಾರೆ ನೇತೃತ್ವದಲ್ಲಿ ನಡೆದಿದ್ದ ಉಪವಾಸ ಸತ್ಯಾಗ್ರಹದಿಂದಾಗಿ ದೇಶದಲ್ಲಿ ಕಾಂಗ್ರೆಸ್ ವಿರೋಧಿ ಅಲೆ ಉಂಟಾಗಿ, ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಬೇಕಾಗಿತ್ತು.

ಸ್ವಚ್ಛ ಮತ್ತು ನ್ಯಾಯಸಮ್ಮತ ರಾಜಕಾರಣ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಾರ್ಟಿ, ರಾಜಕೀಯ ಪರಿಶುದ್ಧತೆಯನ್ನು ಹಾಳು ಮಾಡಿದೆ. ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಆಮ್ ಆದ್ಮಿ ಪಾರ್ಟಿ. ನಾವು ಅವರ ವಿರುದ್ಧ ಧ್ವನಿ ಎತ್ತಿದ್ದೇವೆ. ಆದ್ದರಿಂದ ತಾವು ದೆಹಲಿಗೆ ಬಂದು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಬೇಕು ಮತ್ತು ಚಳುವಳಿಯಲ್ಲಿ ನಮ್ಮನ್ನು ಬೆಂಬಲಿಸಬೇಕು ಎಂದು ಪತ್ರದಲ್ಲಿ ಬಿಜೆಪಿ ಮನವಿ ಮಾಡಿದೆ.

ಈ ಪತ್ರಕ್ಕೆ ಎಎಪಿಯಿಂದ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group